ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಜಿ7 ಶೃಂಗಸಭೆಯಲ್ಲಿ ಫ್ರಾನ್ಸ್ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಸಂವಾದ

Posted On: 18 JUN 2025 2:56PM by PIB Bengaluru

ಕೆನಡಾದ ಕನನಾಸ್ಕಿಸ್‌ನಲ್ಲಿ 2025ರ ಜೂನ್ 17 ರಂದು ನಡೆದ 51ನೇ ಜಿ 7 ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಮಾನ್ಯ ಶ್ರೀ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಸಂವಾದ ನಡೆಸಿದರು. ವಿವಿಧ ವಿಷಯಗಳ ಕುರಿತ ತಮ್ಮ ತಮ್ಮ ದೃಷ್ಟಿಕೋನಗಳನ್ನು ವಿನಿಮಯ ಮಾಡಿಕೊಂಡ ಇಬ್ಬರೂ ನಾಯಕರು, ಭಾರತ ಮತ್ತು ಫ್ರಾನ್ಸ್ ನಮ್ಮ ಭೂಗ್ರಹದ ಯೋಗಕ್ಷೇಮಕ್ಕಾಗಿ ನಿಕಟವಾಗಿ ಕಾರ್ಯನಿರ್ವಹಿಸುವುದನ್ನು ಮುಂದುವರಿಸುತ್ತವೆ ಎಂದು ಪ್ರತಿಪಾದಿಸಿದರು.

ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ:

"ನನ್ನ ಸ್ನೇಹಿತ, ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಸಂವಹನ ನಡೆಸುವುದು ಮತ್ತು ಅನೇಕ ವಿಷಯಗಳ ಕುರಿತು ನಿಲುವುಗಳನ್ನು ವಿನಿಮಯ ಮಾಡಿಕೊಳ್ಳುವುದು ಸದಾ ಸಂತಸದಾಯಕ. ನಮ್ಮ ಭೂಗ್ರಹವನ್ನು ಉತ್ತಮಗೊಳಿಸಲು ನಿಕಟವಾಗಿ ಕಾರ್ಯ ನಿರ್ವಹಿಸುವುದನ್ನು ಭಾರತ ಮತ್ತು ಫ್ರಾನ್ಸ್ ಮುಂದುವರಿಸುತ್ತವೆ.

@EmmanuelMacron”

 

 

*****


(Release ID: 2137327)