ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಜಿ7 ಶೃಂಗಸಭೆಯ ಸಂದರ್ಭದಲ್ಲಿ ಕೊರಿಯಾ ಗಣರಾಜ್ಯದ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ

प्रविष्टि तिथि: 18 JUN 2025 2:53PM by PIB Bengaluru

ಜೂನ್ 17, 2025 ರಂದು ಕೆನಡಾದ ಕನನಾಸ್ಕಿಸ್ ನಲ್ಲಿ ನಡೆದ 51 ನೇ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೊರಿಯಾ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಲೀ ಜೇ-ಮ್ಯುಂಗ್ ಅವರನ್ನು ಭೇಟಿಯಾದರು. ವಾಣಿಜ್ಯ, ಹೂಡಿಕೆ, ತಂತ್ರಜ್ಞಾನ, ಹಸಿರು ಹೈಡ್ರೋಜನ್, ಹಡಗು ನಿರ್ಮಾಣ ಮತ್ತು ಇತರ ಕ್ಷೇತ್ರಗಳಲ್ಲಿ ಭಾರತ ಮತ್ತು ಕೊರಿಯಾ ಗಣರಾಜ್ಯ ಒಟ್ಟಾಗಿ ಕೆಲಸ ಮಾಡಲು ಬಯಸುತ್ತವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.

ಎಕ್ಸ್ ಖಾತೆಯ ಸಂದೇಶದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೀಗೆ ಬರೆದಿದ್ದಾರೆ:

“ಅಧ್ಯಕ್ಷ ಶ್ರೀ ಲೀ ಜೇ-ಮ್ಯುಂಗ್ ಮತ್ತು ನಾನು ಕೆನಡಾದಲ್ಲಿ ಉತ್ತಮ ಮಟ್ಟದಲ್ಲಿ ಸಭೆ ನಡೆಸಿದ್ದೇವೆ. ವಾಣಿಜ್ಯ, ಹೂಡಿಕೆ, ತಂತ್ರಜ್ಞಾನ, ಹಸಿರು ಹೈಡ್ರೋಜನ್, ಹಡಗು ನಿರ್ಮಾಣ ಮತ್ತು ಇತರ ಕ್ಷೇತ್ರಗಳಲ್ಲಿ ಭಾರತ ಮತ್ತು ಕೊರಿಯಾ ಗಣರಾಜ್ಯ ಒಟ್ಟಾಗಿ ಕೆಲಸ ಮಾಡಲು ಬಯಸುತ್ತವೆ. @Jaemyung_Lee”

 

 

*****

 


(रिलीज़ आईडी: 2137356) आगंतुक पटल : 11
इस विज्ञप्ति को इन भाषाओं में पढ़ें: Gujarati , English , Urdu , Marathi , हिन्दी , Bengali , Assamese , Manipuri , Punjabi , Odia , Tamil , Telugu , Malayalam