ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಹಾರಾಷ್ಟ್ರದ ಜೆಜುರಿ-ಮೋರ್ಗಾನ್ ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವ ಹಾನಿಗೆ ಪ್ರಧಾನಮಂತ್ರಿ ಸಂತಾಪ 


ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪರಿಹಾರ ಘೋಷಣೆ

Posted On: 19 JUN 2025 10:58AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಮಹಾರಾಷ್ಟ್ರದ ಜೆಜುರಿ-ಮೋರ್ಗಾನ್ ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.

ಪ್ರಧಾನಮಂತ್ರಿಯವರ ಕಛೇರಿಯ ಹ್ಯಾಂಡಲ್ Xನಲ್ಲಿ ಪೋಸ್ಟ್ ಮಾಡಿ:

"ಮಹಾರಾಷ್ಟ್ರದ ಜೆಜುರಿ-ಮೋರ್ಗಾನ್ ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆದ ಜೀವಹಾನಿಯಾದ ಬಗ್ಗೆ ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಗುಣಮುಖರಾಗಲಿ ಎಂದು ಭಗವಂತನಲ್ಲಿ ಬೇಡಿಕೊಳ್ಳುತ್ತೆನೆ. ಮೃತರ ಕುಟುಂಬಗಳಿಗೆ ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ಘೋಷಿಸಲಾಗಿದೆ: ಪ್ರಧಾನಮಂತ್ರಿ @narendramodi" ಎಂದು ಹೇಳಿದೆ.

 

 

*****


(Release ID: 2137827)