ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಭಾರತ, ಹಂಗೇರಿ, ಪೋಲೆಂಡ್ ಮತ್ತು ಅಮೆರಿಕಾದ ಗಗನಯಾತ್ರಿಗಳನ್ನು ಹೊತ್ತ ಬಾಹ್ಯಾಕಾಶ ಉಡಾವಣೆ ಯಶಸ್ವಿ -  ಪ್ರಧಾನಮಂತ್ರಿ ಸ್ವಾಗತ

Posted On: 25 JUN 2025 1:29PM by PIB Bengaluru

ಭಾರತ, ಹಂಗೇರಿ, ಪೋಲೆಂಡ್ ಮತ್ತು ಅಮೆರಿಕಾದ ಗಗನಯಾತ್ರಿಗಳನ್ನು ಹೊತ್ತ ಬಾಹ್ಯಾಕಾಶ ಯಾನದ ಯಶಸ್ವಿ ಉಡಾವಣೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸ್ವಾಗತಿಸಿದ್ದಾರೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತಲುಪಲಿರುವ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿರುವ ಗ್ರೂಪ್ ಕ್ಯಾಪ್ಟನ್ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರಿಗೆ ಶ್ರೀ ಮೋದಿ ಅವರು ಶುಭ ಹಾರೈಸಿದ್ದಾರೆ.

ಎಕ್ಸ್ ಪೋಸ್ಟ್‌ನಲ್ಲಿ ಅವರು ಹೀಗೆ ಬರೆದಿದ್ದಾರೆ:’

“ಭಾರತ, ಹಂಗೇರಿ, ಪೋಲೆಂಡ್ ಮತ್ತು ಅಮೆರಿಕದ ಗಗನಯಾತ್ರಿಗಳನ್ನು ಹೊತ್ತ ಬಾಹ್ಯಾಕಾಶ ಯಾನದ ಯಶಸ್ವಿ ಉಡಾವಣೆಯನ್ನು ನಾವು ಸ್ವಾಗತಿಸುತ್ತೇವೆ.

ಗ್ರೂಪ್ ಕ್ಯಾಪ್ಟನ್ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತಲುಪಲಿರುವ ಮೊದಲ ಭಾರತೀಯ ಎಂದು ಕರೆಸಿಕೊಳ್ಳುವ ಹಾದಿಯಲ್ಲಿದ್ದಾರೆ. ಅವರು 1.4 ಶತಕೋಟಿ ಭಾರತೀಯರ ಆಶಯಗಳು, ಭರವಸೆಗಳು ಮತ್ತು ಆಕಾಂಕ್ಷೆಗಳನ್ನು ಹೊತ್ತೊಯ್ದಿದ್ದಾರೆ.

ಅವರಿಗೆ ಮತ್ತು ಇತರ ಗಗನಯಾತ್ರಿಗಳಿಗೆ ಸಕಲ ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ!”

 

 

*****


(Release ID: 2139500)