ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಾಜಿ ಪ್ರಧಾನಮಂತ್ರಿ ಶ್ರೀ ಪಿ.ವಿ.ನರಸಿಂಹ ರಾವ್ ಅವರ ಜನ್ಮ ಜಯಂತಿಯಂದು ಪ್ರಧಾನಮಂತ್ರಿ ಗೌರವ ನಮನ

Posted On: 28 JUN 2025 11:19AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾಜಿ ಪ್ರಧಾನಮಂತ್ರಿ ಶ್ರೀ ಪಿ.ವಿ.ನರಸಿಂಹ ರಾವ್ ಅವರಿಗೆ ಅವರ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಗೌರವ ನಮನ ಸಲ್ಲಿಸಿದರು. ರಾಷ್ಟ್ರದ ಆರ್ಥಿಕ ಮತ್ತು ರಾಜಕೀಯ ಪರಿವರ್ತನೆಯ ನಿರ್ಣಾಯಕ ಹಂತದಲ್ಲಿ ಭಾರತದ ಅಭಿವೃದ್ಧಿ ಪಥವನ್ನು ರೂಪಿಸುವಲ್ಲಿ ಅವರು ವಹಿಸಿದ ಪ್ರಮುಖ ಪಾತ್ರವನ್ನು ಸ್ಮರಿಸಿದರು.

ಈ ಸಂಬಂಧ ಎಕ್ಸ್ ಖಾತೆಯ ಪೋಸ್ಟ್ ನಲ್ಲಿ, ಅವರು ಹೀಗೆ ಬರೆದಿದ್ದಾರೆ:

"ಶ್ರೀ ಪಿ.ವಿ.ನರಸಿಂಹ ರಾವ್ ಅವರನ್ನು ಅವರ ಜನ್ಮದಿನದಂದು ಸ್ಮರಿಸುತ್ತೇನೆ. ನಮ್ಮ ಅಭಿವೃದ್ಧಿ ಪಥದ ನಿರ್ಣಾಯಕ ಹಂತದಲ್ಲಿ ಅವರ ಪರಿಣಾಮಕಾರಿ ನಾಯಕತ್ವಕ್ಕಾಗಿ ಭಾರತವು ಅವರಿಗೆ ಕೃತಜ್ಞವಾಗಿದೆ. ಅವರ ಬುದ್ಧಿಶಕ್ತಿ, ಜ್ಞಾನ ಮತ್ತು ಪಾಂಡಿತ್ಯ ಸ್ವಭಾವವನ್ನು ಸಹ ವ್ಯಾಪಕವಾಗಿ ಪ್ರಶಂಸಿಸಲಾಗಿದೆ,’’ ಎಂದಿದ್ದಾರೆ.

 

 

*****


(Release ID: 2140464)