ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿಗಳಿಗೆ ಘಾನಾದ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
Posted On:
03 JUL 2025 2:12AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ವಿಶಿಷ್ಟ ರಾಜನೀತಿ ಮತ್ತು ಪ್ರಭಾವಶಾಲಿ ಜಾಗತಿಕ ನಾಯಕತ್ವಕ್ಕಾಗಿ ಘಾನಾ ಅಧ್ಯಕ್ಷರಾದ ಮಾನ್ಯ ಜಾನ್ ಡ್ರಾಮಾನಿ ಮಹಮ ಅವರು ಘಾನಾದ ರಾಷ್ಟ್ರೀಯ ಗೌರವವಾದ ಆಫೀಸರ್ - ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆಫ್ ಘಾನಾ - ಪ್ರದಾನ ಮಾಡಿದರು. 140 ಕೋಟಿ ಭಾರತೀಯರ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದ ಪ್ರಧಾನಮಂತ್ರಿ ಅವರು, ಈ ಪ್ರಶಸ್ತಿಯನ್ನು ಭಾರತದ ಯುವಜನರ ಆಕಾಂಕ್ಷೆಗಳು, ದೇಶದ ಸಾಂಸ್ಕೃತಿಕ ಸಂಪ್ರದಾಯಗಳು ಮತ್ತು ವೈವಿಧ್ಯತೆ ಹಾಗೂ ಘಾನಾ ಮತ್ತು ಭಾರತದ ನಡುವಿನ ಐತಿಹಾಸಿಕ ಸಂಬಂಧಗಳಿಗೆ ಅರ್ಪಿಸುವುದಾಗಿ ಹೇಳಿದರು.
ಈ ವಿಶೇಷ ಅಭಿವ್ಯಕ್ತಿಗಾಗಿ ಪ್ರಧಾನಮಂತ್ರಿಯವರು ಘಾನಾದ ಜನರು ಮತ್ತು ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದರು. ಎರಡೂ ದೇಶಗಳು ಹಂಚಿತ ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ಸಂಪ್ರದಾಯಗಳನ್ನು ಹೊಂದಿದ್ದು ಪಾಲುದಾರಿಕೆಯನ್ನು ಪೋಷಿಸುವುದನ್ನು ಮುಂದುವರಿಸುತ್ತವೆ ಎಂದು ಹೇಳಿದ ಪ್ರಧಾನಮಂತ್ರಿ, ಈ ಪ್ರಶಸ್ತಿಯು ಉಭಯ ದೇಶಗಳ ನಡುವಿನ ಮೈತ್ರಿಯನ್ನು ಮತ್ತಷ್ಟು ಗಟ್ಟಿಗೊಳಿಸುತ್ತದೆ ಮತ್ತು ದ್ವಿಪಕ್ಷೀಯ ಬಾಂಧವ್ಯವನ್ನು ಇನ್ನಷ್ಟು ಮುನ್ನಡೆಸುವ ಹೊಸ ಜವಾಬ್ದಾರಿಯನ್ನು ತಮ್ಮ ಮೇಲಿರಿಸಿದೆ ಎಂದರು. ಘಾನಾದ ತಮ್ಮ ಐತಿಹಾಸಿಕ ಭೇಟಿಯು ಭಾರತ-ಘಾನಾ ನಡುವಿನ ಬಾಂಧವ್ಯಗಳಿಗೆ ಹೊಸ ಆವೇಗವನ್ನು ನೀಡಲಿದೆ ಎಂದು ಪ್ರಧಾನಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು.
*****
(Release ID: 2141771)
Read this release in:
English
,
Urdu
,
Marathi
,
Hindi
,
Nepali
,
Bengali
,
Bengali-TR
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam