ಪ್ರಧಾನ ಮಂತ್ರಿಯವರ ಕಛೇರಿ
ಟ್ರಿನಿಡಾಡ್ ಮತ್ತು ಟೊಬಾಗೋ ಪ್ರಧಾನಮಂತ್ರಿಗೆ ರಾಮ ಮಂದಿರದ ಪ್ರತಿರೂಪ ಮತ್ತು ಪವಿತ್ರ ಜಲ ಉಡುಗೊರೆಯಾಗಿ ನೀಡಿದ ಪ್ರಧಾನಮಂತ್ರಿ
प्रविष्टि तिथि:
04 JUL 2025 8:57AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಗೌರವಾರ್ಥವಾಗಿ ಆಯೋಜಿಸಲಾದ ಭೋಜನಕೂಟದಲ್ಲಿ ಪ್ರಧಾನಮಂತ್ರಿ ಕಮಲ ಪ್ರಸಾದ್-ಬಿಸ್ಸೆಸ್ಸರ್ ಅವರಿಗೆ ಅಯೋಧ್ಯೆಯಲ್ಲಿರುವ ರಾಮ ಮಂದಿರದ ಪ್ರತಿರೂಪವನ್ನು ಉಡುಗೊರೆಯಾಗಿ ನೀಡಿದ್ದಾರೆ. ಅಲ್ಲದೆ, ಅವರು ಸರಯು ನದಿಯಿಂದ ಮತ್ತು ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭದ ಪವಿತ್ರ ನೀರನ್ನು ಸಮರ್ಪಿಸಿದರು.
ಪ್ರಧಾನಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ.
“ಪ್ರಧಾನಮಂತ್ರಿ ಕಮಲ ಪ್ರಸಾದ್-ಬಿಸ್ಸೆಸ್ಸರ್ ಅವರು ಆಯೋಜಿಸಿದ್ದ ಭೋಜನಕೂಟದಲ್ಲಿ, ನಾನು ಅಯೋಧ್ಯೆಯಲ್ಲಿರುವ ರಾಮ ಮಂದಿರದ ಪ್ರತಿರೂಪವನ್ನು ಮತ್ತು ಸರಯು ನದಿಯಿಂದ ಮತ್ತು ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭದ ಪವಿತ್ರ ನೀರನ್ನು ಉಡುಗೊರೆಯಾಗಿ ನೀಡಿದ್ದೇನೆ. ಅವು ಭಾರತ ಮತ್ತು ಟ್ರಿನಿಡಾಡ್ ಮತ್ತು ಟೊಬಾಗೋ ನಡುವಿನ ಆಳವಾದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಬಾಂಧವ್ಯದ ಸಂಕೇತವಾಗಿವೆ."
*****
(रिलीज़ आईडी: 2142190)
आगंतुक पटल : 8
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Nepali
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam