ಪ್ರಧಾನ ಮಂತ್ರಿಯವರ ಕಛೇರಿ
ಟ್ರಿನಿಡಾಡ್ ಮತ್ತು ಟೊಬಾಗೊ ಅಧ್ಯಕ್ಷರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
Posted On:
04 JUL 2025 11:37PM by PIB Bengaluru
ಪೋರ್ಟ್ ಆಫ್ ಸ್ಪೇನ್ ನಲ್ಲಿರುವ ಅಧ್ಯಕ್ಷರ ಭವನದಲ್ಲಿ ಟ್ರಿನಿಡಾಡ್ ಮತ್ತು ಟೊಬಾಗೊ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಕ್ರಿಸ್ಟೀನ್ ಕಾರ್ಲಾ ಕಂಗಲೂ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭೇಟಿಯಾದರು. ಈ ಉಭಯ ನಾಯಕರ ಸಭೆಯು ಆತ್ಮೀಯತೆ ಮತ್ತು ಎರಡೂ ರಾಷ್ಟ್ರಗಳ ನಡುವಿನ ಆಳವಾದ ಸ್ನೇಹದ ಪುನಸ್ಮರಣೆಯಿಂದ ವಿಶೇಷವಾಗಿ ಗುರುತಿಸಲ್ಪಟ್ಟಿತು.
ತಮಗೆ ಮತ್ತು ತಮ್ಮ ನಿಯೋಗಕ್ಕೆ ನೀಡಿದ ಉದಾರ ಆತಿಥ್ಯಕ್ಕಾಗಿ ಪ್ರಧಾನಮಂತ್ರಿಯವರು ಹೃತ್ಪೂರ್ವಕ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು ಮತ್ತು 'ಆರ್ಡರ್ ಆಫ್ ದಿ ರಿಪಬ್ಲಿಕ್ ಆಫ್ ಟ್ರಿನಿಡಾಡ್ ಮತ್ತು ಟೊಬಾಗೊ' ಪ್ರಶಸ್ತಿಯನ್ನು ನೀಡಿದ್ದಕ್ಕಾಗಿ ತಮ್ಮ ಪ್ರಾಮಾಣಿಕ ಕೃತಜ್ಞತೆಯನ್ನು ಪ್ರಧಾನಮಂತ್ರಿಯವರು ವ್ಯಕ್ತಪಡಿಸಿದರು - ಇದು ಭಾರತದ 1.4 ಶತಕೋಟಿ ಜನರಿಗೆ ದೊರೆತ ಗೌರವ ಎಂದು ಪ್ರಧಾನಮಂತ್ರಿಯವರು ಈ ಸಂದರ್ಭದಲ್ಲಿ ಬಣ್ಣಿಸಿದರು.
ಈ ವರ್ಷ ಪ್ರವಾಸಿ ಭಾರತೀಯ ಸಮ್ಮಾನ್ ಪ್ರಶಸ್ತಿಯನ್ನು ಪಡೆದಿದ್ದಕ್ಕಾಗಿ ಪ್ರಧಾನಮಂತ್ರಿಯವರು ಅಧ್ಯಕ್ಷ ಶ್ರೀ ಕಂಗಲೂ ಅವರನ್ನು ಅಭಿನಂದಿಸಿದರು ಮತ್ತು ಅವರ ವಿಶಿಷ್ಟ ಸಾರ್ವಜನಿಕ ಸೇವೆಗೆ ಆಳವಾದ ಮೆಚ್ಚುಗೆಯನ್ನು ಪ್ರಧಾನಮಂತ್ರಿಯವರು ವ್ಯಕ್ತಪಡಿಸಿದರು. ಭಾರತಕ್ಕಾಗಿ ವಿಶೇಷ ಕಾಳಜಿ ಹೊಂದಿರುವ ಪ್ರಧಾನಮಂತ್ರಿಯವರ ನಾಯಕತ್ವ ಮತ್ತು ದೃಷ್ಟಿಕೋನವನ್ನುಅಧ್ಯಕ್ಷ ಶ್ರೀ ಕಂಗಲೂ ಅವರು ಶ್ಲಾಘಿಸಿದರು.
ಜನರ-ಜನರ ನಡುವಿನ ಬಲವಾದ ಪರಸ್ಪರ ಸಂಬಂಧಗಳಿಂದ ಕೂಡಿದ ಎರಡೂ ದೇಶಗಳು ಹಂಚಿಕೊಂಡಿರುವ ಶಾಶ್ವತ ಬಾಂಧವ್ಯದ ಬಗ್ಗೆ ಉಭಯ ನಾಯಕರು ಚಿಂತನೆ ನಡೆಸಿದರು.
ಜಾಗತಿಕ ದಕ್ಷಿಣ ಪಾಲುದಾರಿಕೆಯನ್ನು ಹೆಚ್ಚಿಸಲು ಟ್ರಿನಿಡಾಡ್ ಮತ್ತು ಟೊಬಾಗೋ ಹಾಗೂ ಕಾರಿಕೊಮ್ ಗೆ ಭಾರತದ ನಿರಂತರ ಬೆಂಬಲವನ್ನುನೀಡುವುದಾಗಿ ಪ್ರಧಾನಮಂತ್ರಿಯವರು ಪುನರುಚ್ಚರಿಸಿದರು. ಭಾರತಕ್ಕೆ ಭೇಟಿ ನೀಡುವಂತೆ ಅಧ್ಯಕ್ಷ ಶ್ರೀ ಕಂಗಲೂ ಅವರನ್ನು ಪ್ರಧಾನಮಂತ್ರಿಯವರು ವಿಶೇಷವಾಗಿ ಆಹ್ವಾನಿಸಿದರು.
*****
(Release ID: 2142439)
Visitor Counter : 2
Read this release in:
Odia
,
English
,
Urdu
,
Hindi
,
Assamese
,
Bengali
,
Punjabi
,
Gujarati
,
Tamil
,
Telugu
,
Malayalam