ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ದಲೈ ಲಾಮಾ ಅವರ 90ನೇ ಜನ್ಮದಿನದಂದು ಶುಭಾಶಯ ಕೋರಿದ ಪ್ರಧಾನಮಂತ್ರಿ 

Posted On: 06 JUL 2025 8:12AM by PIB Bengaluru

ದಲೈ ಲಾಮಾ ಅವರ 90ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಾರ್ದಿಕ ಶುಭಾಶಯ ಕೋರಿದ್ದಾರೆ. ದಲೈ ಲಾಮಾ ಅವರು ಪ್ರೀತಿ, ಕರುಣೆ, ತಾಳ್ಮೆ ಮತ್ತು ನೈತಿಕ ಶಿಸ್ತಿನ ಶಾಶ್ವತ ಸಂಕೇತವಾಗಿದ್ದಾರೆ ಎಂದು ಶ್ರೀ ಮೋದಿ ಹೇಳಿದ್ದಾರೆ. ಅವರ ಸಂದೇಶವು ಎಲ್ಲಾ ಧಾರ್ಮಿಕ ವರ್ಗಗಳಲ್ಲಿ ಗೌರವ ಮತ್ತು ಮೆಚ್ಚುಗೆ ಪಡೆದಿವೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಪ್ರಧಾನಮಂತ್ರಿಯವರು ಎಕ್ಸ್ ನಲ್ಲಿನ ತಮ್ಮ ಸಂದೇಶದಲ್ಲಿ ಹೀಗೆ ಹೇಳಿದ್ದಾರೆ:

"ಭಾರತದ 140 ಕೋಟಿ ಜನರೊಂದಿಗೆ ನಾನು ಪೂಜ್ಯ ದಲೈ ಲಾಮಾ ಅವರ 90ನೇ ಜನುಮದಿನದಂದು ಅವರಿಗೆ ಆತ್ಮೀಯವಾಗಿ ಶುಭ ಕೋರುತ್ತೇನೆ. ಅವರು ಪ್ರೀತಿ, ಕರುಣೆ, ತಾಳ್ಮೆ ಮತ್ತು ನೈತಿಕ ಶಿಸ್ತಿನ ಶಾಶ್ವತ ಸಂಕೇತವಾಗಿದ್ದಾರೆ. ಅವರ ಸಂದೇಶವು ಎಲ್ಲಾ ಧರ್ಮಗಳಲ್ಲಿ ಗೌರವ ಮತ್ತು ಮೆಚ್ಚುಗೆಯನ್ನು ಪ್ರೇರೇಪಿಸಿದೆ. ಅವರ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ನಾವು ನಿರಂತರವಾಗಿ ಪ್ರಾರ್ಥಿಸುತ್ತೇವೆ."

@DalaiLama"

 


(Release ID: 2142639)