ಪ್ರಧಾನ ಮಂತ್ರಿಯವರ ಕಛೇರಿ
ಬ್ರೆಜಿಲ್ ನ ರಿಯೋ ಡಿ ಜನೈರೊದಲ್ಲಿ ನಡೆಯುತ್ತಿರುವ 17ನೇ ಬ್ರಿಕ್ಸ್ ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಮಂತ್ರಿ ಅವರು ಮಲೇಷ್ಯಾದ ಪ್ರಧಾನಮಂತ್ರಿಯವರೊಂದಿಗೆ ಸಭೆ ನಡೆಸಿದರು
प्रविष्टि तिथि:
07 JUL 2025 5:13AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬ್ರೆಜಿಲ್ ನ ರಿಯೋ ಡಿ ಜನೈರೊದಲ್ಲಿ ನಡೆದ 17ನೇ ಬ್ರಿಕ್ಸ್ ಶೃಂಗಸಭೆಯ ನೇಪಥ್ಯದಲ್ಲಿ ಮಲೇಷ್ಯಾ ಪ್ರಧಾನಮಂತ್ರಿ ಘನತೆವೆತ್ತ ಅನ್ವರ್ ಬಿನ್ ಇಬ್ರಾಹಿಂ ಅವರನ್ನು ಭೇಟಿ ಮಾಡಿದರು.
ವ್ಯಾಪಾರ ಮತ್ತು ಹೂಡಿಕೆ, ರಕ್ಷಣೆ, ಶಿಕ್ಷಣ, ಆರೋಗ್ಯ, ಪ್ರವಾಸೋದ್ಯಮ ಮತ್ತು ಜನರ ನಡುವಿನ ಸಂಪರ್ಕ ಸೇರಿದಂತೆ 2024 ರ ಆಗಸ್ಟ್ ನಲ್ಲಿ ಮಲೇಷ್ಯಾ ಪ್ರಧಾನಿ ಅವರು ಭಾರತಕ್ಕೆ ಅಧಿಕೃತ ಭೇಟಿ ನೀಡಿದ ನಂತರ ಭಾರತ ಮತ್ತು ಮಲೇಷ್ಯಾ ನಡುವಿನ ದ್ವಿಪಕ್ಷೀಯ ಸಂಬಂಧಗಳ ಪ್ರಗತಿಯನ್ನು ನಾಯಕರು ಪರಿಶೀಲಿಸಿದರು.
ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸಿದ್ದಕ್ಕಾಗಿ ಪ್ರಧಾನಮಂತ್ರಿ ಅವರು ಪ್ರಧಾನಮಂತ್ರಿ ಇಬ್ರಾಹಿಂ ಅವರಿಗೆ ಧನ್ಯವಾದ ಅರ್ಪಿಸಿದರು. ಇಬ್ಬರೂ ನಾಯಕರು ಬಹುಪಕ್ಷೀಯ ವಲಯ ಮತ್ತು ಪ್ರಾದೇಶಿಕ ಭದ್ರತೆಯಲ್ಲಿನ ಸಹಕಾರದ ಬಗ್ಗೆಯೂ ಚರ್ಚಿಸಿದರು.
ಆಸಿಯಾನ್ ನ ಯಶಸ್ವಿ ನಿರ್ವಹಣೆಗಾಗಿ ಮಲೇಷ್ಯಾವನ್ನು ಪ್ರಧಾನಮಂತ್ರಿ ಅವರು ಅಭಿನಂದಿಸಿದರು ಮತ್ತು ಆಸಿಯಾನ್-ಭಾರತ ಎಫ್ ಟಿಎಯ ಪರಾಮರ್ಶೆಯನ್ನು ಶೀಘ್ರವಾಗಿ ಮತ್ತು ಯಶಸ್ವಿಯಾಗಿ ಪೂರ್ಣಗೊಳಿಸುವುದು ಸೇರಿದಂತೆ ಬಲವಾದ ಆಸಿಯಾನ್-ಭಾರತ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಗೆ ಅದರ ನಿರಂತರ ಬೆಂಬಲವನ್ನು ಸ್ವಾಗತಿಸಿದರು.
*****
(रिलीज़ आईडी: 2142816)
आगंतुक पटल : 8
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Bengali
,
Bengali-TR
,
Assamese
,
Punjabi
,
Gujarati
,
Odia
,
Tamil
,
Telugu
,
Malayalam