ಪ್ರಧಾನ ಮಂತ್ರಿಯವರ ಕಛೇರಿ
ಬ್ರೆಜಿಲ್ ನ ರಿಯೋ ಡಿ ಜನೈರೊದಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಮಂತ್ರಿ ಅವರು ಕ್ಯೂಬಾದ ಅಧ್ಯಕ್ಷರನ್ನು ಭೇಟಿಯಾದರು
प्रविष्टि तिथि:
07 JUL 2025 5:19AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬ್ರೆಜಿಲ್ ನ ರಿಯೋ ಡಿ ಜನೈರೊದಲ್ಲಿ ನಡೆಯುತ್ತಿರುವ 17ನೇ ಬ್ರಿಕ್ಸ್ ಶೃಂಗಸಭೆಯ ನೇಪಥ್ಯದಲ್ಲಿ ಕ್ಯೂಬಾದ ಅಧ್ಯಕ್ಷ ಘನತೆವೆತ್ತ ಮಿಗುಯೆಲ್ ಡಯಾಜ್-ಕ್ಯಾನೆಲ್ ಬೆರ್ಮುಡೆಜ್ ಅವರನ್ನು ಭೇಟಿ ಮಾಡಿದರು. 2023ರಲ್ಲಿ ಜೋಹಾನ್ಸ್ ಬರ್ಗ್ ನಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಕ್ಯೂಬಾ ವಿಶೇಷ ಆಹ್ವಾನಿತರಾಗಿದ್ದಾಗ ಪ್ರಧಾನಿ ನರೇಂದ್ರ ಮೋದಿ ಅವರು ಅಧ್ಯಕ್ಷ ಡಿಯಾಜ್-ಕ್ಯಾನೆಲ್ ಅವರನ್ನು ಭೇಟಿ ಮಾಡಿದ್ದರು.
ಇಬ್ಬರೂ ನಾಯಕರು ಆರ್ಥಿಕ ಸಹಕಾರ, ಅಭಿವೃದ್ಧಿ ಪಾಲುದಾರಿಕೆ, ಫಿನ್ ಟೆಕ್, ಸಾಮರ್ಥ್ಯ ವರ್ಧನೆ, ವಿಜ್ಞಾನ ಮತ್ತು ತಂತ್ರಜ್ಞಾನ, ವಿಪತ್ತು ನಿರ್ವಹಣೆ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿನ ದ್ವಿಪಕ್ಷೀಯ ಸಂಬಂಧಗಳನ್ನು ಪರಿಶೀಲಿಸಿದರು. ಡಿಜಿಟಲ್ ವೇದಿಕೆಯಲ್ಲಿ ಭಾರತದ ಪರಿಣತಿಯನ್ನು ಒಪ್ಪಿಕೊಂಡ ಅಧ್ಯಕ್ಷ ಡಿಯಾಜ್-ಕ್ಯಾನೆಲ್ ಅವರು ಭಾರತದ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ ಮತ್ತು ಯುಪಿಐನಲ್ಲಿ ಆಸಕ್ತಿ ವ್ಯಕ್ತಪಡಿಸಿದರು.
ಕ್ಯೂಬಾವು ಆಯುರ್ವೇದವನ್ನು ಗುರುತಿಸಿದ್ದಕ್ಕಾಗಿ ಮತ್ತು ಕ್ಯೂಬಾದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯಲ್ಲಿ ಆಯುರ್ವೇದವನ್ನು ಸಂಯೋಜಿಸಲು ಬೆಂಬಲ ನೀಡಿದ್ದಕ್ಕಾಗಿ ಪ್ರಧಾನಮಂತ್ರಿ ಅವರು ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. ಭಾರತೀಯ ಜೆನೆರಿಕ್ ಔಷಧಿಗಳಿಗೆ ಪ್ರವೇಶವನ್ನು ಒದಗಿಸುವ ಭಾರತೀಯ ಔಷಧಶಾಸ್ತ್ರವನ್ನು ಕ್ಯೂಬಾ ಗುರುತಿಸಬೇಕೆಂದು ಪ್ರಧಾನಮಂತ್ರಿ ಅವರು ಪ್ರಸ್ತಾಪಿಸಿದರು.
ಆರೋಗ್ಯ, ಸಾಂಕ್ರಾಮಿಕ ರೋಗಗಳು ಮತ್ತು ಹವಾಮಾನ ಬದಲಾವಣೆ ಸೇರಿದಂತೆ ಜಾಗತಿಕ ದಕ್ಷಿಣಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಕೆಲಸ ಮಾಡಲು ಇಬ್ಬರೂ ನಾಯಕರು ಒಪ್ಪಿಕೊಂಡರು. ಬಹುಪಕ್ಷೀಯ ವಲಯದಲ್ಲಿ ಉಭಯ ದೇಶಗಳ ನಡುವಿನ ಸಹಕಾರವನ್ನು ಅವರು ಶ್ಲಾಘಿಸಿದರು.
*****
(रिलीज़ आईडी: 2142821)
आगंतुक पटल : 11
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Bengali
,
Bengali-TR
,
Assamese
,
Punjabi
,
Gujarati
,
Odia
,
Tamil
,
Telugu
,
Malayalam