ಪ್ರಧಾನ ಮಂತ್ರಿಯವರ ಕಛೇರಿ
17ನೇ ಬ್ರಿಕ್ಸ್ ಶೃಂಗಸಭೆ - ಪರಿಸರ, ಸಿಒಪಿ-30 ಮತ್ತು ಜಾಗತಿಕ ಆರೋಗ್ಯ ಕುರಿತ ಅಧಿವೇಶನವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
Posted On:
07 JUL 2025 11:38PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು "ಪರಿಸರ, ಸಿಒಪಿ-30 ಮತ್ತು ಜಾಗತಿಕ ಆರೋಗ್ಯ" ಕುರಿತಾದ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು. ಈ ಅಧಿವೇಶನದಲ್ಲಿ ಬ್ರಿಕ್ಸ್ ಸದಸ್ಯರು, ಪಾಲುದಾರ ರಾಷ್ಟ್ರಗಳು ಮತ್ತು ಆಹ್ವಾನಿತ ರಾಷ್ಟ್ರಗಳು ಭಾಗವಹಿಸಿದ್ದವು. ವಿಶ್ವದ ಭವಿಷ್ಯಕ್ಕಾಗಿ ಇಂತಹ ಮಹತ್ವದ ವಿಷಯ ಕುರಿತು ಅಧಿವೇಶನವನ್ನು ಆಯೋಜಿಸಿದ್ದಕ್ಕಾಗಿ ಅವರು ಬ್ರೆಜಿಲ್ ಗೆ ಧನ್ಯವಾದ ಸಲ್ಲಿಸಿದರು. ಭಾರತಕ್ಕೆ ಹವಾಮಾನ ಬದಲಾವಣೆಯು ಕೇವಲ ಇಂಧನ ಸಮಸ್ಯೆಗಳನ್ನು ನಿಭಾಯಿಸುವುದಲ್ಲ, ಬದಲಾಗಿ ಅದು ಜೀವನ ಮತ್ತು ನಿಸರ್ಗದ ನಡುವಿನ ಸಮತೋಲನದ ಮೇಲೆ ಪರಿಣಾಮ ಬೀರುವುದಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಭಾರತವು ಹವಾಮಾನ ನ್ಯಾಯವನ್ನು ಈಡೇರಿಸಬೇಕಾದ ನೈತಿಕ ಜವಾಬ್ದಾರಿಯಾಗಿ ನೋಡುತ್ತದೆ ಎಂದು ಅವರು ಒತ್ತಿ ಹೇಳಿದರು. ಪರಿಸರ ಕ್ರಮಕ್ಕೆ ಭಾರತದ ಆಳವಾದ ಬದ್ಧತೆಯನ್ನು ಪುನರುಚ್ಚರಿಸಿದ ಅವರು, ಜನರು ಮತ್ತು ಗ್ರಹದ ಅಭಿವೃದ್ಧಿಯನ್ನು ಉತ್ತೇಜಿಸಲು ಅದು ಕೈಗೊಂಡ ಉಪಕ್ರಮಗಳಾದ ಅಂತಾರಾಷ್ಟ್ರೀಯ ಸೌರ ಒಕ್ಕೂಟ, ವಿಪತ್ತು ಸ್ಥಿತಿಸ್ಥಾಪಕ ಮೂಲಸೌಕರ್ಯಕ್ಕಾಗಿ ಒಕ್ಕೂಟ, ಜಾಗತಿಕ ಜೈವಿಕ ಇಂಧನ ಒಕ್ಕೂಟ, ಅಂತರರಾಷ್ಟ್ರೀಯ ಬಿಗ್ ಕ್ಯಾಟ್ ಒಕ್ಕೂಟ, ಮಿಷನ್ ಲೈಫ್, ತಾಯಿಯ ಹೆಸರಿನಲ್ಲಿ ಒಂದು ಗಿಡ ಇತ್ಯಾದಿಗಳ ಬಗ್ಗೆ ವಿವರಿಸಿದರು.
ಭಾರತವು ಬೆಳವಣಿಗೆಯ ಸುಸ್ಥಿರ ಹಾದಿಯಲ್ಲಿದೆ ಎಂದು ಪ್ರಧಾನಿ ಹೇಳಿದರು. ಇದು ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿದ್ದರೂ, ಪ್ಯಾರಿಸ್ ಬದ್ಧತೆಗಳನ್ನು ಸಮಯಕ್ಕೆ ಮುಂಚಿತವಾಗಿಯೇ ಪೂರೈಸಿತು ಎಂದು ಹೇಳಿದರು. ಅಭಿವೃದ್ಧಿಶೀಲ ರಾಷ್ಟ್ರಗಳು ಹವಾಮಾನ ಬದಲಾವಣೆಗೆ ಕ್ರಮ ಕೈಗೊಳ್ಳಲು ಅನುವು ಮಾಡಿಕೊಡಲು ತಂತ್ರಜ್ಞಾನ ವರ್ಗಾವಣೆ ಮತ್ತು ಕೈಗೆಟುಕುವ ಹಣಕಾಸು ಒದಗಿಸುವಂತೆ ಅವರು ಕರೆ ನೀಡಿದರು. ಈ ನಿಟ್ಟಿನಲ್ಲಿ, ಗುಂಪು ಅಳವಡಿಸಿಕೊಂಡ ಹವಾಮಾನ ಹಣಕಾಸು ಕುರಿತು ಚೌಕಟ್ಟಿನ ಘೋಷಣೆಯು ಒಂದು ಪ್ರಮುಖ ಹೆಜ್ಜೆಯಾಗಿದೆ ಎಂದು ಅವರು ಹೇಳಿದರು.
ಹಸಿರು ಅಭಿವೃದ್ಧಿಗೆ ಭಾರತದ ಬದ್ಧತೆಯನ್ನು ವಿವರಿಸಿದ ಪ್ರಧಾನಿ, ಕೋವಿಡ್ ಸಾಂಕ್ರಾಮಿಕ ರೋಗ ಸೇರಿದಂತೆ ದೇಶಗಳಿಗೆ ಬೆಂಬಲ ನೀಡುವಲ್ಲಿ ಭಾರತ "ಒಂದು ಭೂಮಿ, ಒಂದು ಆರೋಗ್ಯ" ಎಂಬ ಮಂತ್ರವನ್ನು ಅಳವಡಿಸಿಕೊಂಡಿದೆ ಎಂದು ಹೇಳಿದರು. ಭಾರತ ಡಿಜಿಟಲ್ ಆರೋಗ್ಯ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ ಮತ್ತು ಅವುಗಳನ್ನು ಜಾಗತಿಕ ದಕ್ಷಿಣ ದೇಶಗಳೊಂದಿಗೆ ಹಂಚಿಕೊಳ್ಳಲು ಸಿದ್ಧವಾಗಿದೆ ಎಂದು ಅವರು ಒತ್ತಿ ಹೇಳಿದರು. ಈ ಹಿನ್ನೆಲೆಯಲ್ಲಿ, ಸಾಮಾಜಿಕವಾಗಿ ನಿರ್ಧರಿಸಲ್ಪಟ್ಟ ರೋಗಗಳ ನಿರ್ಮೂಲನೆಗಾಗಿ ಬ್ರಿಕ್ಸ್ ಪಾಲುದಾರಿಕೆ ಎಂಬ ಘೋಷಣೆಯನ್ನು ಅಂಗೀಕರಿಸುವುದನ್ನು ಅವರು ಸ್ವಾಗತಿಸಿದರು.
ಮುಂದಿನ ವರ್ಷ ಭಾರತ ಬ್ರಿಕ್ಸ್ ಅಧ್ಯಕ್ಷತೆಯನ್ನು ವಹಿಸಿಕೊಳ್ಳಲಿದೆ. ಈ ಸಂದರ್ಭದಲ್ಲಿ, ಭಾರತವು ತನ್ನ ಕಾರ್ಯಸೂಚಿಯಲ್ಲಿ ಜಾಗತಿಕ ದಕ್ಷಿಣಕ್ಕೆ ಆದ್ಯತೆ ನೀಡುತ್ತದೆ ಮತ್ತು ಜನ-ಕೇಂದ್ರಿತ ಮತ್ತು "ಮಾನವೀಯತೆ ಮೊದಲು" ಎಂಬ ವಿಧಾನದ ಮೇಲೆ ಕೇಂದ್ರೀಕರಿಸುತ್ತದೆ ಎಂದು ಪ್ರಧಾನಿ ಹೇಳಿದರು. ಭಾರತದ ಅಧ್ಯಕ್ಷತೆಯಲ್ಲಿ, ಬ್ರಿಕ್ಸ್ ಅನ್ನು ಹೊಸ ರೂಪದಲ್ಲಿ ಪ್ರಸ್ತುತಪಡಿಸಲು ಪ್ರಯತ್ನಿಸಲಾಗುತ್ತದೆ ಮತ್ತು ಅದರ ಸಂಕ್ಷಿಪ್ತ ರೂಪ - ಸಹಕಾರ ಮತ್ತು ಸ್ಥಿರತೆಗಾಗಿ ಸ್ಥಿತಿಸ್ಥಾಪಕತ್ವ ಮತ್ತು ನಾವೀನ್ಯತೆ ನಿರ್ಮಾಣ ಎಂದಾಗಿರುತ್ತದೆ ಪ್ರಧಾನಿ ಹೇಳಿದರು. ಶೃಂಗಸಭೆಯ ಯಶಸ್ವಿ ಸಂಘಟನೆಗಾಗಿ ಅವರು ಅಧ್ಯಕ್ಷ ಲೂಲಾ ಅವರನ್ನು ಅಭಿನಂದಿಸಿದರು ಮತ್ತು ಆತ್ಮೀಯ ಆತಿಥ್ಯಕ್ಕಾಗಿ ಅವರಿಗೆ ಧನ್ಯವಾದ ಸಲ್ಲಿಸಿದರು.
*****
(Release ID: 2143047)
Read this release in:
Telugu
,
Malayalam
,
English
,
Urdu
,
Marathi
,
Hindi
,
Manipuri
,
Assamese
,
Bengali
,
Punjabi
,
Gujarati
,
Tamil