ಪ್ರಧಾನ ಮಂತ್ರಿಯವರ ಕಛೇರಿ
ಬ್ರೆಜಿಲ್ ನ ರಿಯೋ ಡಿ ಜನೈರೊದಲ್ಲಿ ನಡೆಯುತ್ತಿರುವ 17ನೇ ಬ್ರಿಕ್ಸ್ ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಮಂತ್ರಿ ಅವರು ಉರುಗ್ವೆ ಅಧ್ಯಕ್ಷರನ್ನು ಭೇಟಿ ಮಾಡಿದರು
Posted On:
07 JUL 2025 9:20PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬ್ರೆಜಿಲ್ ನ ರಿಯೋ ಡಿ ಜನೈರೊದಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯ ನೇಪಥ್ಯದಲ್ಲಿ ಉರುಗ್ವೆ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಯಮಂಡು ಒರ್ಸಿ ಅವರನ್ನು ಭೇಟಿ ಮಾಡಿದರು.
ಉಭಯ ನಾಯಕರು ದ್ವಿಪಕ್ಷೀಯ ಸಂಬಂಧಗಳ ಸಂಪೂರ್ಣ ವ್ಯಾಪ್ತಿಯನ್ನು ಒಳಗೊಂಡ ಚರ್ಚೆಗಳನ್ನು ನಡೆಸಿದರು. ಡಿಜಿಟಲ್ ಸಹಯೋಗ, ಐಸಿಟಿ, ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ ಮತ್ತು ಯುಪಿಐ, ರಕ್ಷಣೆ, ರೈಲ್ವೆ, ಆರೋಗ್ಯ ಮತ್ತು ಔಷಧೀಯ, ಕೃಷಿ, ಇಂಧನ, ಸಂಸ್ಕೃತಿ ಮತ್ತು ಜನರ ನಡುವಿನ ಸಂಪರ್ಕ ಕ್ಷೇತ್ರಗಳಲ್ಲಿನ ಸಹಕಾರವನ್ನು ಅವರು ಪರಿಶೀಲಿಸಿದರು. ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆಯನ್ನು ಬಲಪಡಿಸುವುದು ಚರ್ಚೆಯ ಪ್ರಮುಖ ಕ್ಷೇತ್ರವಾಗಿತ್ತು. ಹೆಚ್ಚಿನ ಆರ್ಥಿಕ ಸಾಮರ್ಥ್ಯ ಮತ್ತು ವ್ಯಾಪಾರದ ಅವಕಾಶಗಳನ್ನು ಮುಕ್ತಗೊಳಿಸುವ ಗುರಿಯನ್ನು ಹೊಂದಿರುವ ಭಾರತ-ಮೆರ್ಕೋಸುರ್ ಆದ್ಯತಾ ವ್ಯಾಪಾರ ಒಪ್ಪಂದದ ವಿಸ್ತರಣೆಯಲ್ಲಿ ಎರಡೂ ಕಡೆಯವರು ಆಸಕ್ತಿ ವ್ಯಕ್ತಪಡಿಸಿದರು.
ಪಹಲ್ಗಾಮ್ ನಲ್ಲಿ ಇತ್ತೀಚೆಗೆ ನಡೆದ ಅನಾಗರಿಕ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸಿದ್ದಕ್ಕಾಗಿ ಅಧ್ಯಕ್ಷ ಒರ್ಸಿ ಅವರಿಗೆ ಪ್ರಧಾನಮಂತ್ರಿ ಅವರು ಕೃತಜ್ಞತೆ ಸಲ್ಲಿಸಿದರು ಮತ್ತು ಭಯೋತ್ಪಾದನೆಯ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳ ವಿರುದ್ಧದ ಹೋರಾಟದಲ್ಲಿ ಭಾರತದೊಂದಿಗೆ ಉರುಗ್ವೆಯ ಒಗ್ಗಟ್ಟನ್ನು ಶ್ಲಾಘಿಸಿದರು.
ಮುಂದಾಲೋಚನೆಯ ದ್ವಿಪಕ್ಷೀಯ ಪಾಲುದಾರಿಕೆಯನ್ನು ಅಭಿವೃದ್ಧಿಪಡಿಸುವ ಎರಡೂ ದೇಶಗಳ ಬದ್ಧತೆಯನ್ನು ಸಭೆ ಪುನರುಚ್ಚರಿಸಿತು.
*****
(Release ID: 2143089)
Read this release in:
English
,
Urdu
,
Hindi
,
Marathi
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam