ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರಿಗೆ ಬ್ರೆಜಿಲ್ ನ ಅತ್ಯುನ್ನತ ರಾಷ್ಟ್ರೀಯ ಗೌರವ - "ದಿ ಗ್ರ್ಯಾಂಡ್ ಕಾಲರ್ ಆಫ್ ದಿ ನ್ಯಾಷನಲ್ ಆರ್ಡರ್ ಆಫ್ ದಿ ಸದರ್ನ್ ಕ್ರಾಸ್" ಪ್ರದಾನ

Posted On: 09 JUL 2025 12:58AM by PIB Bengaluru

ಬ್ರೆಜಿಲ್ ಅಧ್ಯಕ್ಷರಾದ ಗೌರವಾನ್ವಿತ ಲೂಯಿಜ್ ಇನಾಸಿಯೊ ಲೂಲಾ ಡ ಸಿಲ್ವಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಬ್ರೆಜಿಲ್ ನ ಅತ್ಯುನ್ನತ ರಾಷ್ಟ್ರೀಯ ಗೌರವವಾದ "ದಿ ಗ್ರ್ಯಾಂಡ್ ಕಾಲರ್ ಆಫ್ ದಿ ನ್ಯಾಷನಲ್ ಆರ್ಡರ್ ಆಫ್ ದಿ ಸದರ್ನ್ ಕ್ರಾಸ್" ಅನ್ನು ಪ್ರದಾನ ಮಾಡಿದರು.

ಈ ವಿಶೇಷ ಗೌರವಕ್ಕಾಗಿ ಪ್ರಧಾನಮಂತ್ರಿಯವರು ಅಧ್ಯಕ್ಷರಿಗೆ, ಬ್ರೆಜಿಲ್ ಸರ್ಕಾರಕ್ಕೆ ಮತ್ತು ಅಲ್ಲಿನ ಜನರಿಗೆ ತಮ್ಮ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡಿದ ಅವರು, ಈ ಗೌರವವು 1.4 ಶತಕೋಟಿ ಭಾರತೀಯ ಜನರಿಗೆ ಮತ್ತು ಭಾರತ ಹಾಗೂ ಬ್ರೆಜಿಲ್ ನಡುವಿನ ಸ್ನೇಹ ಸಂಬಂಧಗಳಿಗೆ ಸಲ್ಲಿಸಿದ ಗೌರವ ಎಂದು ಬಣ್ಣಿಸಿದರು. ಅಧ್ಯಕ್ಷ ಲೂಲಾ ಅವರು ಭಾರತ-ಬ್ರೆಜಿಲ್ ಕಾರ್ಯತಂತ್ರದ ಪಾಲುದಾರಿಕೆಯ ರೂವಾರಿ ಆಗಿದ್ದಾರೆ ಮತ್ತು ಈ ಪ್ರಶಸ್ತಿಯು ದ್ವಿಪಕ್ಷೀಯ ಸಂಬಂಧಗಳನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಅವರು ಮಾಡಿದ ಅವಿರತ ಪ್ರಯತ್ನಗಳಿಗೆ ಸಂದ ಗೌರವವಾಗಿದೆ ಎಂದರು.

ಈ ಪ್ರಶಸ್ತಿಯು ಉಭಯ ದೇಶಗಳ ಜನರ ನಡುವಿನ ಆತ್ಮೀಯ ಮತ್ತು ಸೌಹಾರ್ದ ಸಂಬಂಧಗಳನ್ನು ಮತ್ತಷ್ಟು ಗಟ್ಟಿಗೊಳಿಸಲು ಪ್ರೇರಣೆ ನೀಡುತ್ತದೆ ಎಂದು ಪ್ರಧಾನಮಂತ್ರಿ ಅವರು ಒತ್ತಿ ಹೇಳಿದರು.

 

*****
 


(Release ID: 2143336)