ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಗುಜರಾತ್‌ನ ವಡೋದರಾ ಜಿಲ್ಲೆಯಲ್ಲಿ ಸೇತುವೆ ಕುಸಿತದಿಂದ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ


ಪಿ ಎಂ ಎನ್‌ ಆರ್‌ ಎಫ್‌ ನಿಂದ ಪರಿಹಾರ ಘೋಷಣೆ 

ಪ್ರಕಟಣಾ ದಿನಾಂಕ: 09 JUL 2025 12:49PM by PIB Bengaluru

ಗುಜರಾತ್‌ನ ವಡೋದರಾ ಜಿಲ್ಲೆಯಲ್ಲಿ ಸೇತುವೆ ಕುಸಿತದಿಂದ ಸಂಭವಿಸಿದ ಪ್ರಾಣಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ದುರ್ಘಟನೆಯಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಶ್ರೀ ಮೋದಿ ಅವರು ಹಾರೈಸಿದ್ದಾರೆ.

ಪ್ರಧಾನಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (PMNRF) ಮೃತರ ವಾರಸುದಾರರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಮತ್ತು ಅಪಘಾತದಲ್ಲಿ ಗಾಯಗೊಂಡವರಿಗೆ ತಲಾ  50,000 ರೂ ಪರಿಹಾರ ನೀಡುವುದಾಗಿ‌ ಪ್ರಧಾನಮಂತ್ರಿ ಘೋಷಿಸಿದ್ದಾರೆ. 

ಪ್ರಧಾನಮಂತ್ರಿಗಳ ಕಾರ್ಯಾಲಯದ ಎಕ್ಸ್ ಪೋಸ್ಟ್ ಹೀಗಿದೆ: 

"ಗುಜರಾತ್‌ನ ವಡೋದರಾ ಜಿಲ್ಲೆಯಲ್ಲಿ ಸೇತುವೆ ಕುಸಿತದಿಂದ ಉಂಟಾದ ಜೀವಹಾನಿ ತೀವ್ರ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ.

ಪ್ರತಿ ಮೃತರ ವಾರಸುದಾರರಿಗೆ ಪಿ ಎಂ ಎನ್ ಆರ್ ಎಫ್ ನಿಂದ ತಲಾ 2 ಲಕ್ಷ ರೂಪಾಯಿಗಳನ್ನು ನೀಡಲಾಗುವುದು. ಗಾಯಾಳುಗಳಿಗೆ ತಲಾ‌ ರೂ.50,000 ನೀಡಲಾಗುವುದು: ಪ್ರಧಾನಮಂತ್ರಿ @narendramodi"

 

 

*****

 


(ಪ್ರಕಟಣೆ ಐ.ಡಿ.: 2143441) ವಿಸಿಟರ್ ಕೌಂಟರ್ : 31