ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಐತಿಹಾಸಿಕ ಬಾಹ್ಯಾಕಾಶ ಯಾನದಿಂದ ಭೂಮಿಗೆ ಮರಳಿರುವ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರಿಗೆ ಪ್ರಧಾನಮಂತ್ರಿ ಸ್ವಾಗತ

प्रविष्टि तिथि: 15 JUL 2025 3:34PM by PIB Bengaluru

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ಐ ಎಸ್ ಎಸ್) ದಲ್ಲಿನ ತಮ್ಮ ಐತಿಹಾಸಿಕ ಕಾರ್ಯಾಚರಣೆಯ ಬಳಿಕ ಭೂಮಿಗೆ ಮರಳಿರುವ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಸ್ವಾಗತ ಕೋರಿದ್ದಾರೆ. ಐ ಎಸ್ ಎಸ್ ಗೆ ಪಯಣಿಸಿದ ಭಾರತದ ಮೊದಲ ಗಗನಯಾತ್ರಿಯಾಗಿ, ಗ್ರೂಪ್ ಕ್ಯಾಪ್ಟನ್ ಶುಕ್ಲಾ ಅವರ ಸಾಧನೆಯು ದೇಶದ ಬಾಹ್ಯಾಕಾಶ ಅನ್ವೇಷಣಾ ಪಯಣದಲ್ಲಿ ನಿರ್ಣಾಯಕ ಕ್ಷಣವಾಗಿದೆ ಎಂದು ಅವರು ಬಣ್ಣಿಸಿದ್ದಾರೆ.

ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ:

"ಐತಿಹಾಸಿಕ ಬಾಹ್ಯಾಕಾಶ ಯಾನದಿಂದ ಭೂಮಿಗೆ ಮರಳಿದ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರನ್ನು ರಾಷ್ಟ್ರದ ಜನರೊಂದಿಗೆ ಸ್ವಾಗತಿಸುತ್ತೇನೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ಭಾರತದ ಮೊದಲ ಗಗನಯಾತ್ರಿಯಾಗಿರುವ ಅವರು, ತಮ್ಮ ಸಮರ್ಪಣೆ, ಧೈರ್ಯ ಮತ್ತು ಮುಂಚೂಣಿ ಮನೋಭಾವದ ಮೂಲಕ ಶತಕೋಟಿ ಕನಸುಗಳಿಗೆ ಸ್ಫೂರ್ತಿ ತುಂಬಿದ್ದಾರೆ. ಇದು ನಮ್ಮದೇ ಆದ ಮಾನವ ಬಾಹ್ಯಾಕಾಶ ಹಾರಾಟ ಮಿಷನ್ – ಗಗನಯಾನದತ್ತ ಮತ್ತೊಂದು ಮೈಲಿಗಲ್ಲಾಗಿದೆ."

 

 

*****

 


(रिलीज़ आईडी: 2144888) आगंतुक पटल : 12
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali-TR , Assamese , Manipuri , Bengali , Punjabi , Gujarati , Odia , Tamil , Telugu , Malayalam