ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಉತ್ತರಾಖಂಡದ ಪಿತೋರಾಗಢದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಜೀವ ಹಾನಿಗೆ ಪ್ರಧಾನಮಂತ್ರಿ ಸಂತಾಪ


ಪಿ.ಎಂ.ಎನ್.ಆರ್.ಎಫ್ ನಿಂದ ಪರಿಹಾರ ಘೋಷಿಸಿದ ಪ್ರಧಾನಮಂತ್ರಿ

Posted On: 15 JUL 2025 10:02PM by PIB Bengaluru

ಉತ್ತರಾಖಂಡದ ಪಿತೋರಾಗಢದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ. ಮೃತರ ವಾರಸುದಾರರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಪಿ.ಎಂ.ಎನ್.ಆರ್‌.ಎಫ್) ನಿಂದ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ ತಲಾ 50,000 ರೂಪಾಯಿ ಪರಿಹಾರವನ್ನು ಅವರು ಘೋಷಿಸಿದ್ದಾರೆ.

ಪ್ರಧಾನಮಂತ್ರಿ ಕಾರ್ಯಾಲಯ ಪಿ.ಎಂ.ಒ ಇಂಡಿಯಾ ಹ್ಯಾಂಡಲ್ ನ ಎಕ್ಸ್‌ ಪೋಸ್ಟ್‌ ಹೀಗಿದೆ: 

"ಉತ್ತರಾಖಂಡದ ಪಿತೋರಾಗಢದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಜೀವಹಾನಿಯಿಂದ ದುಃಖವಾಗಿದೆ. ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ.

ಪಿ.ಎಂ.ಎನ್‌.ಆರ್‌.ಎಫ್‌ ನಿಂದ ಮೃತರ ವಾರಸುದಾರರಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ನೀಡಲಾಗುವುದು: ಪ್ರಧಾನಮಂತ್ರಿ @narendramodi"

 

 

*****

 


(Release ID: 2145116) Visitor Counter : 3