ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ವನ ಮಹೋತ್ಸವ ಕಾರ್ಯಕ್ರಮದಲ್ಲಿ ಗೌರವಾನ್ವಿತ ನ್ಯಾಯಾಧೀಶರ ಅತ್ಯುತ್ಸಾಹದ ಪಾಲ್ಗೊಳ್ಳುವಿಕೆಗೆ ಪ್ರಧಾನಮಂತ್ರಿ ಶ್ಲಾಘನೆ

Posted On: 19 JUL 2025 7:02PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವನಮಹೋತ್ಸವ ಕಾರ್ಯಕ್ರಮದಲ್ಲಿ ಗೌರವಾನ್ವಿತ ನ್ಯಾಯಾಧೀಶರ ಉತ್ಸಾಹಭರಿತ ಭಾಗವಹಿಸುವಿಕೆಯನ್ನು ಇಂದು ಶ್ಲಾಘಿಸಿದ್ದಾರೆ. ಪರಿಸರದ ಬಗ್ಗೆ ನಾಗರಿಕರಲ್ಲಿ ಜವಾಬ್ದಾರಿ ಪ್ರೇರೇಪಿಸುವಲ್ಲಿ ಅವರ ಪಾತ್ರವನ್ನು ವಿವರಿಸಿದ್ದಾರೆ. 

ನ್ಯಾಯಾಧೀಶರ ಪಾಲ್ಗೊಳ್ಳುವಿಕೆಯು ತಾಯಂದಿರಿಗೆ ಗೌರವ ಸಲ್ಲಿಸಲು ಜನರು ಸಸಿ ನೆಡುವುದನ್ನು ಪ್ರೋತ್ಸಾಹಿಸುವ ಗುರಿಯನ್ನು ಹೊಂದಿರುವ ರಾಷ್ಟ್ರವ್ಯಾಪಿ ಉಪಕ್ರಮವಾದ “ಏಕ್ ಪೆಡ್ ಮಾ ಕೆ ನಾಮ್” ಗೆ ಹೊಸ ವೇಗವನ್ನು ನೀಡಲಿದೆ ಎಂದು ಪ್ರಧಾನಮಂತ್ರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ದೆಹಲಿ-ಎನ್‌.ಸಿ.ಟಿ ಸಚಿವರಾದ ಶ್ರೀ ಮಂಜಿಂದರ್ ಸಿಂಗ್ ಸಿರ್ಸಾ ಅವರ ಎಕ್ಸ್ ಪೋಸ್ಟ್‌ಗೆ ಶ್ರೀ ಮೋದಿ ಅವರ ಪ್ರತಿಕ್ರಿಯೆ ಹೀಗಿದೆ:

“ವನಮಹೋತ್ಸವ ಕಾರ್ಯಕ್ರಮದಲ್ಲಿ ಗೌರವಾನ್ವಿತ ನ್ಯಾಯಾಧೀಶರ ಭಾಗವಹಿಸುವಿಕೆ ಎಲ್ಲರಿಗೂ ಪ್ರೇರಣೆ ನೀಡಲಿದೆ. ಇದು 'ತಾಯಿಯ ಹೆಸರಿನಲ್ಲಿ ಒಂದು ಸಸಿ (ಏಕ್ ಪೇಡ್ ಮಾ ಕೆ ನಾಮ್)’ ಅಭಿಯಾನಕ್ಕೆ ಹೊಸ ಹುರುಪು ನೀಡಲಿದೆ ಎಂದು ನನಗೆ ವಿಶ್ವಾಸವಿದೆ.”

#EkPedMaaKeNaam”

 

 

*****

 


(Release ID: 2146150)