ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಢಾಕಾದಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

Posted On: 21 JUL 2025 7:07PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಢಾಕಾದಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ  ಜೀವಹಾನಿ ಆದವರಿಗೆ ಸಂತಾಪ ಸೂಚಿಸಿದ್ದಾರೆ. ಭಾರತವು ಬಾಂಗ್ಲಾದೇಶದೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತದೆ ಮತ್ತು ಸಾಧ್ಯವಿರುವ ಎಲ್ಲಾ ಬೆಂಬಲ ಮತ್ತು ಸಹಾಯವನ್ನು ನೀಡಲು ಸಿದ್ಧವಾಗಿದೆ ಎಂದು ಅವರು ಭರವಸೆ ನೀಡಿದರು.

ಈ ಕುರಿತು ಶ್ರೀ ನರೇಂದ್ರ ಮೋದಿ ಅವರು ಎಕ್ಸ್ ಖಾತೆಯ ಪೋಸ್ಟ್ ನಲ್ಲಿ ಹೀಗೆ ಹೇಳಿದರು:

"ಢಾಕಾದಲ್ಲಿ ಸಂಭವಿಸಿದ ದುರಂತ ವಿಮಾನ ಅಪಘಾತದಲ್ಲಿ ಅನೇಕ ಯುವ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿರುವುದು ತೀವ್ರ ಆಘಾತ ಮತ್ತು ದುಃಖ ತಂದಿದೆ. ದುಃಖಿತ ಕುಟುಂಬಗಳಿಗೆ ನಮ್ಮ ಹೃದಯಗಳು ಮಿಡಿಯುತ್ತವೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇವೆ. ಭಾರತವು ಬಾಂಗ್ಲಾದೇಶದೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತದೆ ಮತ್ತು ಸಾಧ್ಯವಿರುವ ಎಲ್ಲಾ ಬೆಂಬಲ ಮತ್ತು ಸಹಾಯವನ್ನು ನೀಡಲು ಸಿದ್ಧವಾಗಿದೆ," ಎಂದು ಹೇಳಿದರು.

 

 

*****

 


(Release ID: 2146658)