ಪ್ರಧಾನ ಮಂತ್ರಿಯವರ ಕಛೇರಿ
ಬ್ರಿಟನ್ ಮತ್ತು ಮಾಲ್ಡೀವ್ಸ್ ಗೆ ಅಧಿಕೃತ ಭೇಟಿ ಮುನ್ನಾದಿನದಂದು ಪ್ರಧಾನಮಂತ್ರಿ ಅವರ ನಿರ್ಗಮನ ಹೇಳಿಕೆ
Posted On:
23 JUL 2025 1:06PM by PIB Bengaluru
ನಾನು ಜುಲೈ 23 ರಿಂದ 26 ರವರೆಗೆ ಬ್ರಿಟನ್ ಮತ್ತು ಮಾಲ್ಡೀವ್ಸ್ ಗೆ ಭೇಟಿ ನೀಡುತ್ತಿದ್ದೇನೆ.
ಭಾರತ ಮತ್ತು ಬ್ರಿಟನ್ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಹಂಚಿಕೊಂಡಿದ್ದು, ಇತ್ತೀಚಿನ ವರ್ಷಗಳಲ್ಲಿ ಅದು ಗಮನಾರ್ಹ ಪ್ರಗತಿಗೆ ಸಾಕ್ಷಿಯಾಗಿದೆ. ನಮ್ಮ ಸಹಯೋಗವು ವ್ಯಾಪಾರ, ಹೂಡಿಕೆ, ತಂತ್ರಜ್ಞಾನ, ನಾವೀನ್ಯತೆ, ರಕ್ಷಣೆ, ಶಿಕ್ಷಣ, ಸಂಶೋಧನೆ, ಸುಸ್ಥಿರತೆ, ಆರೋಗ್ಯ ಮತ್ತು ಜನರ ನಡುವಿನ ಸಂಬಂಧಗಳು ಸೇರಿದಂತೆ ವ್ಯಾಪಕ ಶ್ರೇಣಿಯ ಕ್ಷೇತ್ರಗಳನ್ನು ವ್ಯಾಪಿಸಿದೆ. ಪ್ರಧಾನಮಂತ್ರಿ ಗೌರವಾನ್ವಿತ ಸರ್ ಕೈರ್ ಸ್ಟಾರ್ಮರ್ ಅವರೊಂದಿಗಿನ ನನ್ನ ಭೇಟಿಯ ವೇಳೆ, ಉಭಯ ದೇಶಗಳ ಸಮೃದ್ಧಿ, ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ನಮ್ಮ ಆರ್ಥಿಕ ಪಾಲುದಾರಿಕೆಯನ್ನು ಮತ್ತಷ್ಟು ಹೆಚ್ಚಿಸಲು ನಮಗೆ ಅವಕಾಶ ಸಿಗಲಿದೆ. ಈ ಭೇಟಿಯ ವೇಳೆ ಘನತೆವೆತ್ತ ದೊರೆ ಮೂರನೇ ಚಾರ್ಲ್ಸ್ ಅವರನ್ನು ಭೇಟಿ ಮಾಡಲು ನಾನು ಎದುರು ನೋಡುತ್ತಿದ್ದೇನೆ.
ನಂತರ ನಾನು ಮಾಲ್ಡೀವ್ಸ್ ಗೆ ಪ್ರಯಾಣ ಬೆಳೆಸಲಿದ್ದು, ಅಧ್ಯಕ್ಷ ಘನತೆವೆತ್ತ ಡಾ. ಮೊಹಮ್ಮದ್ ಮುಯಿಝು ಅವರ ಆಹ್ವಾನದ ಮೇರೆಗೆ ಮಾಲ್ಡೀವ್ಸ್ ನ ಸ್ವಾತಂತ್ರ್ಯದ 60ನೇ ವರ್ಷಾಚರಣೆಯಲ್ಲಿ ಪಾಲ್ಗೊಳ್ಳಲಿದ್ದೇನೆ. ಈ ವರ್ಷ ನಮ್ಮ ಎರಡೂ ದೇಶಗಳ ನಡುವೆ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 60ನೇ ವಾರ್ಷಿಕೋತ್ಸವವನ್ನು ಸೂಚಿಸುತ್ತದೆ. ಸಮಗ್ರ ಆರ್ಥಿಕ ಮತ್ತು ಕಡಲ ಭದ್ರತಾ ಪಾಲುದಾರಿಕೆಯ ನಮ್ಮ ಜಂಟಿ ದೃಷ್ಟಿಕೋನವನ್ನು ಮುನ್ನಡೆಸಲು ಮತ್ತು ಹಿಂದೂ ಮಹಾಸಾಗರ ಪ್ರದೇಶದಲ್ಲಿ ಶಾಂತಿ, ಸಮೃದ್ಧಿ ಮತ್ತು ಸ್ಥಿರತೆಗಾಗಿ ನಮ್ಮ ಸಹಕಾರವನ್ನು ಬಲಪಡಿಸಲು ಅಧ್ಯಕ್ಷ ಮುಯಿಝು ಮತ್ತು ಇತರ ರಾಜಕೀಯ ನಾಯಕತ್ವದೊಂದಿಗಿನ ನನ್ನ ಸಭೆಗಳನ್ನು ನಾನು ಎದುರು ನೋಡುತ್ತಿದ್ದೇನೆ.
ಈ ಭೇಟಿಯು ಸ್ಪಷ್ಟ ಫಲಿತಾಂಶಗಳನ್ನು ನೀಡುತ್ತದೆ, ನಮ್ಮ ಜನರಿಗೆ ಪ್ರಯೋಜನವನ್ನು ನೀಡುತ್ತದೆ ಜೊತೆಗೆ ನಮ್ಮ ʻನೆರೆಹೊರೆಯವರು ಮೊದಲು ನೀತಿʼಯನ್ನು ಮುಂದಕ್ಕೆ ಕೊಂಡೊಯ್ಯಲಿದೆ ಎಂದು ನನಗೆ ವಿಶ್ವಾಸವಿದೆ.
*****
(Release ID: 2147406)
Read this release in:
English
,
Urdu
,
Hindi
,
Marathi
,
Bengali
,
Bengali-TR
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam