ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ರಾಜಸ್ಥಾನದ ಜಾಲಾವಾಡ ಶಾಲಾ ಅವಘಡಕ್ಕೆ ಪ್ರಧಾನಮಂತ್ರಿ ಸಂತಾಪ

Posted On: 25 JUL 2025 11:17AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಸ್ಥಾನದ ಜಾಲಾವಾಡ ದ ಶಾಲೆಯಲ್ಲಿ ಸಂಭವಿಸಿದ ಅವಘಡಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. "ಈ ಕಷ್ಟದ ಸಮಯದಲ್ಲಿ ತೊಂದರೆಗೊಳಗಾದ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳೊಂದಿಗೆ ನಾನಿದ್ದೇನೆ " ಎಂದು ಶ್ರೀ ಮೋದಿ ಹೇಳಿದ್ದಾರೆ. 

ಪ್ರಧಾನಮಂತ್ರಿಗಳ ಕಚೇರಿಯು  'X' ನಲ್ಲಿ ಹೀಗೆ ಪೋಸ್ಟ್ ಮಾಡಿದೆ:

"ರಾಜಸ್ಥಾನದ ಜಾಲಾವಾಡ ದ ಶಾಲೆಯೊಂದರಲ್ಲಿ ಸಂಭವಿಸಿದ ದುರಂತವು ದುಃಖಕರ ಮತ್ತು ತೀವ್ರವಾಗಿ ನೋವುಂಟುಮಾಡಿದೆ. ಈ ಕಷ್ಟದ ಸಮಯದಲ್ಲಿ ತೊಂದರೆಗೊಳಗಾದ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳೊಂದಿಗೆ ನಾನಿದ್ದೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಸಂಬಂಧ ಪಟ್ಟ ಅಧಿಕಾರಿಗಳು ಸಂತ್ರಸ್ತರಿಗೆ ಎಲ್ಲಾ ಸಂಭಾವ್ಯ ನೆರವು ನೀಡುತ್ತಿದ್ದಾರೆ: ಪ್ರಧಾನಮಂತ್ರಿ ಶ್ರೀ @narendramodi"

 

 

*****

 


(Release ID: 2148259)