ಪ್ರಧಾನ ಮಂತ್ರಿಯವರ ಕಛೇರಿ
ರಷ್ಯಾ ವಿಮಾನ ಪತನ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ
Posted On:
24 JUL 2025 11:04PM by PIB Bengaluru
ರಷ್ಯಾದಲ್ಲಿ ಸಂಭವಿಸಿದ ವಿಮಾನ ಪತನ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. "ನಾವು ರಷ್ಯಾ ಮತ್ತು ಅಲ್ಲಿನ ಜನರೊಂದಿಗೆ ಜೊತೆಯಾಗಿ ನಿಲ್ಲುತ್ತೇವೆ" ಎಂದು ಶ್ರೀ ಮೋದಿ ಅವರು ಭರವಸೆ ನೀಡಿದ್ದಾರೆ.
ಪ್ರಧಾನಮಂತ್ರಿಗಳು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:
"ರಷ್ಯಾದಲ್ಲಿ ಸಂಭವಿಸಿದ ವಿಮಾನ ಪತನ ದುರಂತದಲ್ಲಿ ಜೀವಹಾನಿಯಿಂದ ತೀವ್ರ ದುಃಖವಾಗಿದೆ. ಸಂತ್ರಸ್ತರ ಕುಟುಂಬಗಳಿಗೆ ನಮ್ಮ ಆಳವಾದ ಸಂತಾಪಗಳು. ನಾವು ರಷ್ಯಾ ಮತ್ತು ಅಲ್ಲಿನ ಜನರೊಂದಿಗೆ ಜೊತೆಯಾಗಿ ನಿಲ್ಲುತ್ತೇವೆ."
*****
(Release ID: 2148285)