ಪ್ರಧಾನ ಮಂತ್ರಿಯವರ ಕಛೇರಿ
ಸಿ ಆರ್ ಪಿ ಎಫ್ ಸಿಬ್ಬಂದಿಗಳಿಗೆ ಸ್ಥಾಪನಾ ದಿನದಂದು ಪ್ರಧಾನಮಂತ್ರಿ ಶುಭಾಶಯ
Posted On:
27 JUL 2025 9:40AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್ಲಾ ಸಿ ಆರ್ ಪಿ ಎಫ್ ಸಿಬ್ಬಂದಿಗಳಿಗೆ ಅವರ ಸ್ಥಾಪನಾ ದಿನದಂದು ಶುಭಾಶಯ ಕೋರಿದ್ದಾರೆ. "ಸಿ ಆರ್ ಪಿ ಎಫ್ ಸಿಬ್ಬಂದಿಗಳು ಕಠಿಣ ಪರೀಕ್ಷಾರ್ಥ ಸಂದರ್ಭಗಳಲ್ಲಿ ತಮ್ಮ ಕರ್ತವ್ಯ, ಧೈರ್ಯ ಮತ್ತು ದೃಢ ಬದ್ಧತೆಯಿಂದ ಛಾಪನ್ನು ಮೂಡಿಸಿದ್ದಾರೆ" ಎಂದು ಶ್ರೀ ಮೋದಿ ಹೇಳಿದ್ದಾರೆ.
ಪ್ರಧಾನಮಂತ್ರಿಯವರು X ನಲ್ಲಿ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:
"ಎಲ್ಲಾ ಸಿ ಆರ್ ಪಿ ಎಫ್ ಸಿಬ್ಬಂದಿಗೆ ಸ್ಥಾಪನಾ ದಿನದ ಶುಭಾಶಯಗಳು. ಈ ಪಡೆಯು ನಮ್ಮ ಭದ್ರತಾ ವ್ಯವಸ್ಥೆಯಲ್ಲಿ, ವಿಶೇಷವಾಗಿ ಆಂತರಿಕ ಭದ್ರತೆಗೆ ಸಂಬಂಧಿಸಿದ ಸವಾಲಿನ ಅಂಶಗಳಲ್ಲಿ ಪ್ರಮುಖ ಪಾತ್ರ ವಹಿಸಿದೆ. ಸಿ ಆರ್ ಪಿ ಎಫ್ ಸಿಬ್ಬಂದಿ ಕಠಿಣ ಪರೀಕ್ಷಾರ್ಥ ಸಂದರ್ಭಗಳಲ್ಲಿ ತಮ್ಮ ಕರ್ತವ್ಯ, ಧೈರ್ಯ ಮತ್ತು ದೃಢ ಬದ್ಧತೆಯಿಂದ ಛಾಪನ್ನು ಮೂಡಿಸಿದ್ದಾರೆ. ಮಾನವೀಯ ಸವಾಲುಗಳನ್ನು ಎದುರಿಸುವಲ್ಲಿ ಅವರ ಕೊಡುಗೆ ಶ್ಲಾಘನೀಯ."
@crpfindia
*****
(Release ID: 2148994)
Read this release in:
Assamese
,
Odia
,
English
,
Urdu
,
Marathi
,
Hindi
,
Manipuri
,
Bengali
,
Punjabi
,
Gujarati
,
Tamil
,
Telugu
,
Malayalam