ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಸಮಗ್ರ ಕಾರ್ಯತಾಂತ್ರಿಕ ಪಾಲುದಾರಿಕೆ ಮತ್ತಷ್ಟು ಬಲಪಡಿಸುವ ಬದ್ಧತೆ ಪುನರುಚ್ಚರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಯು.ಎ.ಇ ಅಧ್ಯಕ್ಷ ಗೌರವಾನ್ವಿತ ಮೊಹಮ್ಮದ್ ಬಿನ್ ಝಾಯೆದ್

Posted On: 31 JUL 2025 12:32PM by PIB Bengaluru

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಿನ್ನೆ ದೂರವಾಣಿ ಮೂಲಕ ಸಂಯುಕ್ತ ಅರಬ್ ಎಮಿರೇಟ್ಸ್ (ಯು.ಎ.ಇ) ಅಧ್ಯಕ್ಷರಾದ ಗೌರವಾನ್ವಿತ ಶೇಖ್ ಮೊಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರೊಂದಿಗೆ ಸಮಾಲೋಚನೆ ನಡೆಸಿದರು. 

ಭಾರತ ಮತ್ತು ಯು.ಎ.ಇ ನಡುವಿನ ದ್ವಿಪಕ್ಷೀಯ ಸಮಗ್ರ ಕಾರ್ಯತಂತ್ರ ಪಾಲುದಾರಿಕೆಯನ್ನು ಮತ್ತಷ್ಟು ಬಲವರ್ಧನೆಗೊಳಿಸುವ ಪರಸ್ಪರ ಬದ್ಧತೆಯನ್ನು ಉಭಯ ನಾಯಕರು ಪುನರುಚ್ಚರಿಸಿದರು. ದ್ವಿಪಕ್ಷೀಯ ಸಹಕಾರದ ವಿವಿಧ ಕ್ಷೇತ್ರಗಳಲ್ಲಿ ಆಗಿರುವ ಗಮನಾರ್ಹ ಪ್ರಗತಿಯನ್ನು ಅವರು ಸಕಾರಾತ್ಮಕವಾಗಿ ಪರಿಶೀಲಿಸಿದರು ಮತ್ತು ಎರಡೂ ದೇಶಗಳ ಜನರ ಸಮಾನ ಪ್ರಯೋಜನಕ್ಕಾಗಿ ಸಹಯೋಗವನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಮತ್ತು ಗಾಢಗೊಳಿಸುವತ್ತ ಮಾತುಕತೆಯಲ್ಲಿ ಹೆಚ್ಚಿನ ಒತ್ತು ನೀಡಿದರು.

ಭಾರತದ ಇತಿಹಾಸದಲ್ಲಿ ಅತಿ ಹೆಚ್ಚು ದಿನ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಎರಡನೇ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗೌರವಾನ್ವಿತ ಶೇಖ್ ಮೊಹಮ್ಮದ್ ಅವರು ಹೃತ್ಪೂರ್ವಕವಾಗಿ ಅಭಿನಂದಿಸಿದರು ಮತ್ತು ರಾಷ್ಟ್ರಕ್ಕೆ ಅವರು ಸಲ್ಲಿಸುತ್ತಿರುವ ಸೇವೆಯಲ್ಲಿ ಅವರು ನಿರಂತರವಾಗಿ ಯಶಸ್ಸನ್ನು ಕಾಣಲಿ ಎಂದು ಹಾರೈಸಿದರು.

ಭಾರತದ ಜನರ ಬಗ್ಗೆ ತೋರಿದ ಪ್ರೀತಿ ಮತ್ತು ಶುಭಾಶಯಗಳಿಗಾಗಿ ಪ್ರಧಾನಮಂತ್ರಿ ಅವರು ಯು.ಎ.ಇ ಅಧ್ಯಕ್ಷರಿಗೆ ಧನ್ಯವಾದಗಳನ್ನು ಸಮರ್ಪಿಸಿದರು.

 

*****
 


(Release ID: 2150622)