ಪ್ರಧಾನ ಮಂತ್ರಿಯವರ ಕಛೇರಿ
ಉತ್ತರ ಪ್ರದೇಶದ ಗೊಂಡಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
ಪಿ.ಎಂ.ಎನ್.ಆರ್.ಎಫ್. ನಿಂದ ಪರಿಹಾರ ಘೋಷಿಸಿದ ಪ್ರಧಾನಮಂತ್ರಿ
Posted On:
03 AUG 2025 1:36PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಗೊಂಡಾದಲ್ಲಿ ಸಂಭವಿಸಿದ ಅಪಘಾತದಿಂದ ಜೀವಹಾನಿಯಾದವರಿಗೆ ಸಂತಾಪ ಸೂಚಿಸಿದ್ದಾರೆ. ಪಿ.ಎಂ.ಎನ್.ಆರ್.ಎಫ್ ನಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.
ಪಿ.ಎಂ.ಒ ಇಂಡಿಯಾ ಖ್ಯಾತೆಯ ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹೇಳಿದೆ:
"ಉತ್ತರ ಪ್ರದೇಶದ ಗೊಂಡಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿರುವುದು ತೀವ್ರ ದುಃಖ ತಂದಿದೆ. ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ. ಮೃತರ ಕುಟುಂಬಗಳಿಗೆ ಪಿ.ಎಂ.ಎನ್.ಆರ್.ಎಫ್ ನಿಂದ ತಲಾ 2 ಲಕ್ಷ ರೂ. ಗಾಯಗೊಂಡವರಿಗೆ 50,000 ರೂ. ಘೋಷಿಸಿದ್ದಾರೆ. ಪ್ರಧಾನಮಂತ್ರಿ @narendramodi,’’ ಎಂದಿದ್ದಾರೆ.
*****
(Release ID: 2151947)
Read this release in:
English
,
Urdu
,
Marathi
,
Hindi
,
Bengali
,
Bengali-TR
,
Manipuri
,
Assamese
,
Punjabi
,
Gujarati
,
Tamil
,
Telugu
,
Malayalam