ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಅವರಿಂದ ಕರ್ತವ್ಯ ಭವನ ರಾಷ್ಟ್ರಕ್ಕೆ ಸಮರ್ಪಣೆ
ಸಾರ್ವಜನಿಕ ಸೇವೆಗೆ ನಮ್ಮ ಅಚಲ ಬದ್ಧತೆಯನ್ನು ಕರ್ತವ್ಯ ಭವನ ಪ್ರತಿಬಿಂಬಿಸುತ್ತದೆ: ಪ್ರಧಾನಮಂತ್ರಿ
ಪ್ರಧಾನಮಂತ್ರಿಯವರು ಆವರಣದಲ್ಲಿ ಸಸಿ ನೆಟ್ಟು, ಪರಿಸರ ಸ್ನೇಹಿ ನಿರ್ಮಾಣದ ಬಗ್ಗೆ ಒತ್ತಿ ಹೇಳಿದರು
Posted On:
06 AUG 2025 3:28PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕರ್ತವ್ಯ ಭವನವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಇದು ಸಾರ್ವಜನಿಕ ಸೇವೆಗೆ ಇರುವ ಅಚಲ ಬದ್ಧತೆ ಮತ್ತು ನಿರಂತರ ಪ್ರಯತ್ನದ ಸಂಕೇತ ಎಂದು ಬಣ್ಣಿಸಿದರು.
ಕರ್ತವ್ಯ ಭವನವು ನೀತಿಗಳು ಮತ್ತು ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು ಸಹಾಯ ಮಾಡುತ್ತದೆ. ಅಲ್ಲದೆ ರಾಷ್ಟ್ರದ ಅಭಿವೃದ್ಧಿಗೆ ಹೊಸ ವೇಗ ನೀಡುತ್ತದೆ ಎಂದು ಅವರು ಹೇಳಿದರು.
ಅಭಿವೃದ್ಧಿ ಹೊಂದಿದ ಮತ್ತು ಸ್ವಾವಲಂಬಿ ಭಾರತವನ್ನು ನಿರ್ಮಿಸುವ ನಮ್ಮ ಬದ್ಧತೆಯನ್ನು ಕರ್ತವ್ಯ ಭವನ ಪ್ರತಿಬಿಂಬಿಸುತ್ತದೆ ಎಂದು ಶ್ರೀ ಮೋದಿ ಅವರು ತಿಳಿಸಿದರು.
ಇಂದು, ನಮ್ಮ ಶ್ರಮಯೋಗಿಗಳ ಅವಿರತ ಪರಿಶ್ರಮ ಮತ್ತು ಸಂಕಲ್ಪಕ್ಕೆ ರಾಷ್ಟ್ರವು ಸಾಕ್ಷಿಯಾಗಿದೆ.
ಅವರೊಂದಿಗೆ ಸಂವಾದ ನಡೆಸಲು ನನಗೆ ಸಂತೋಷವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಪರಿಸರ ಸಂರಕ್ಷಣೆಗೆ ಸಂಪೂರ್ಣ ಗಮನ ನೀಡಿ ಈ ಕಟ್ಟಡವನ್ನು ನಿರ್ಮಿಸಲಾಗಿದೆ ಎಂದು ಪ್ರಧಾನಮಂತ್ರಿಯವರು ತಿಳಿಸಿದರು. ಈ ಸಂದರ್ಭದಲ್ಲಿ, ಪ್ರಧಾನಮಂತ್ರಿಯವರು ಕರ್ತವ್ಯ ಭವನದ
ಆವರಣದಲ್ಲಿ ಸಸಿ ನೆಟ್ಟರು. ಪ್ರಧಾನಮಂತ್ರಿಯವರು 'X' ನಲ್ಲಿನ ಸರಣಿ ಪೋಸ್ಟ್ ಗಳಲ್ಲಿ, ಈ ವಿಷಯಗಳನ್ನು ಹಂಚಿಕೊಂಡಿದ್ದಾರೆ.
“कर्तव्य पथ पर कर्तव्य भवन जन-जन की सेवा के प्रति हमारे अटूट संकल्प और निरंतर प्रयासों का प्रतीक है। यह ना केवल हमारी नीतियों और योजनाओं को लोगों तक तेजी से पहुंचाने में मददगार बनने वाला है, बल्कि इससे देश के विकास को भी एक नई गति मिलेगी। अत्याधुनिक इंफ्रास्ट्रक्चर की मिसाल बने इस भवन को राष्ट्र को समर्पित कर बहुत ही गौरवान्वित हूं।”
“कर्तव्य भवन विकसित और आत्मनिर्भर भारत के निर्माण के लिए हमारी प्रतिबद्धता को दर्शाता है। इसे गढ़ने वाले हमारे श्रमयोगियों की अथक मेहनत और संकल्प-शक्ति का आज देश साक्षी बना है। उनसे संवाद कर अत्यंत प्रसन्नता हुई है।”
“कर्तव्य भवन के निर्माण में पर्यावरण संरक्षण का पूरा ध्यान रखा गया है, जिसके लिए हमारा देश संकल्पबद्ध है। आज इसके प्रांगण में एक पौधा लगाने का भी सुअवसर मिला।”
*****
(Release ID: 2153122)
Read this release in:
English
,
Urdu
,
Marathi
,
Hindi
,
Bengali-TR
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam