ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಬ್ರೆಜಿಲ್ ಅಧ್ಯಕ್ಷರಿಂದ ದೂರವಾಣಿ ಕರೆ


ಕಳೆದ ತಿಂಗಳು ಬ್ರೆಜಿಲ್ ಗೆ ನೀಡಿದ್ದ ಭೇಟಿಯನ್ನು ಸ್ಮರಿಸಿದ ಪ್ರಧಾನಮಂತ್ರಿ

ವ್ಯಾಪಾರ, ತಂತ್ರಜ್ಞಾನ, ಇಂಧನ, ರಕ್ಷಣೆ, ಕೃಷಿ, ಆರೋಗ್ಯ ಮತ್ತು ಜನರ ನಡುವಿನ ಸಂಬಂಧಗಳಲ್ಲಿ ಸಹಕಾರವನ್ನು ಹೆಚ್ಚಿಸಲು ಇಬ್ಬರೂ ನಾಯಕರು ಸಮ್ಮತಿಸಿದರು

ಅವರು ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು

Posted On: 07 AUG 2025 9:34PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬ್ರೆಜಿಲ್ ಅಧ್ಯಕ್ಷ ಘನತೆವೆತ್ತ ಶ್ರೀ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.

ಕಳೆದ ತಿಂಗಳು ಬ್ರೆಜಿಲ್ ಗೆ ಭೇಟಿ ನೀಡಿದ್ದನ್ನು ಸ್ಮರಿಸಿದ ಪ್ರಧಾನಮಂತ್ರಿ ಅವರು, ಈ ಸಂದರ್ಭದಲ್ಲಿ ಇಬ್ಬರೂ ನಾಯಕರು ವ್ಯಾಪಾರ, ತಂತ್ರಜ್ಞಾನ, ಇಂಧನ, ರಕ್ಷಣೆ, ಕೃಷಿ, ಆರೋಗ್ಯ ಮತ್ತು ಜನರ ನಡುವಿನ ಸಂಬಂಧಗಳಲ್ಲಿ ಸಹಕಾರವನ್ನು ಬಲಪಡಿಸುವ ಚೌಕಟ್ಟನ್ನು ಒಪ್ಪಿಕೊಂಡರು.

ಈ ಚರ್ಚೆಗಳ ಆಧಾರದ ಮೇಲೆ, ಭಾರತ-ಬ್ರೆಜಿಲ್ ವ್ಯೂಹಾತ್ಮಕ ಪಾಲುದಾರಿಕೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ಬದ್ಧತೆಯನ್ನು ಅವರು ಪುನರುಚ್ಚರಿಸಿದರು.

ಇಬ್ಬರೂ ನಾಯಕರು ಪರಸ್ಪರ ಹಿತಾಸಕ್ತಿಯ ವಿವಿಧ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.

ನಂತರ ಇಬ್ಬರೂ ನಾಯಕರು ಸಂಪರ್ಕದಲ್ಲಿರಲು ಸಮ್ಮತಿಸಿದರು.

 

*****
 


(Release ID: 2154040)