ಪ್ರಧಾನ ಮಂತ್ರಿಯವರ ಕಛೇರಿ
ರಷ್ಯಾ ಅಧ್ಯಕ್ಷರಾದ ಪುಟಿನ್ ಅವರೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತುಕತೆ
ಉಕ್ರೇನ್‌ಗೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳ ಕುರಿತು ಅಧ್ಯಕ್ಷ ಪುಟಿನ್ ಅವರಿಂದ ಪ್ರಧಾನಮಂತ್ರಿಗಳಿಗೆ ಸಂಕ್ಷಿಪ್ತ ವಿವರಣೆ
ಸಂಘರ್ಷದ ಶಾಂತಿಯುತ ಪರಿಹಾರಕ್ಕಾಗಿ ಭಾರತದ ಸ್ಥಿರ ನಿಲುವು ಪುನರುಚ್ಚರಿಸಿದ ಪ್ರಧಾನಮಂತ್ರಿ
ಉಭಯ ನಾಯಕರಿಂದ ಭಾರತ-ರಷ್ಯಾ ವಿಶೇಷ ಮತ್ತು ವರ್ಧಿತ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯ ಪುನರುಚ್ಚಾರ
ವಾರ್ಷಿಕ ದ್ವಿಪಕ್ಷೀಯ ಶೃಂಗಸಭೆಗಾಗಿ ಈ ವರ್ಷಾಂತ್ಯದ ವೇಳೆಗೆ ಭಾರತಕ್ಕೆ ಭೇಟಿ ನೀಡುವಂತೆ ಅಧ್ಯಕ್ಷ ಪುಟಿನ್ ಅವರಿಗೆ ಪ್ರಧಾಮಂತ್ರಿ ಆಹ್ವಾನ
ಪ್ರಕಟಣಾ ದಿನಾಂಕ:
08 AUG 2025 6:31PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಷ್ಯಾ ಒಕ್ಕೂಟದ ಅಧ್ಯಕ್ಷರಾದ ಮಾನ್ಯ ಶ್ರೀ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.
ಉಕ್ರೇನ್ ಗೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಅಧ್ಯಕ್ಷ ಪುಟಿನ್ ಅವರು ಪ್ರಧಾನಮಂತ್ರಿಗಳಿಗೆ ಸಂಕ್ಷಿಪ್ತ ವಿವರಣೆ ನೀಡಿದರು.
ಅಧ್ಯಕ್ಷ ಪುಟಿನ್ ಅವರ ವಿಸ್ತೃತ ಪರಿಶೀಲನೆಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಮಂತ್ರಿಗಳು, ಸಂಘರ್ಷದ ಶಾಂತಿಯುತ ಪರಿಹಾರಕ್ಕಾಗಿ ಭಾರತದ ಸ್ಥಿರ ನಿಲುವನ್ನು ಪುನರುಚ್ಚರಿಸಿದರು.
ಇಬ್ಬರೂ ನಾಯಕರು ದ್ವಿಪಕ್ಷೀಯ ಕಾರ್ಯಸೂಚಿಯಲ್ಲಿನ ಪ್ರಗತಿಯ ಪರಾಮರ್ಶೆ ನಡೆಸಿದರು ಹಾಗೂ ಭಾರತ ಮತ್ತು ರಷ್ಯಾ ನಡುವಿನ ವಿಶೇಷ ಮತ್ತು ವರ್ಧಿತ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಆಳವಾಗಿಸುವ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು.
ಭಾರತದಲ್ಲಿ ಈ ವರ್ಷದ ಕೊನೆಯ ವೇಳೆಗೆ ನಡೆಯಲಿರುವ 23ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯಲ್ಲಿ ಭಾಗಿಯಾಗುವಂತೆ ಅಧ್ಯಕ್ಷ ಪುಟಿನ್ ಅವರನ್ನು ಪ್ರಧಾನಮಂತ್ರಿಗಳು ಆಹ್ವಾನಿಸಿದರು.
*****
(ಪ್ರಕಟಣೆ ಐ.ಡಿ.: 2154642)
ವಿಸಿಟರ್ ಕೌಂಟರ್ : 25
ಪ್ರಕಟಣೆಯನ್ನು ಇದರಲ್ಲಿ ಓದಿ:
Odia
,
English
,
Urdu
,
Marathi
,
हिन्दी
,
Bengali
,
Manipuri
,
Assamese
,
Punjabi
,
Gujarati
,
Tamil
,
Telugu
,
Malayalam