ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಉಜ್ಬೇಕಿಸ್ತಾನ ಅಧ್ಯಕ್ಷರಿಂದ ಪ್ರಧಾನಮಂತ್ರಿ ಅವರಿಗೆ ದೂರವಾಣಿ ಕರೆ


ಅಧ್ಯಕ್ಷರಾದ ಮಿರ್ಜಿಯೋಯೆವ್ ಅವರು ಭಾರತದ ಪ್ರಧಾನಮಂತ್ರಿಗಳಿಗೆ ಮತ್ತು ಜನತೆಗೆ ಮುಂಬರುವ 79ನೇ ಸ್ವಾತಂತ್ರ್ಯ ದಿನದ ಶುಭಾಶಯಗಳನ್ನು ತಿಳಿಸಿದ್ದಾರೆ

ಎರಡೂ ದೇಶಗಳ ನಾಯಕರಿಂದ ದ್ವಿಪಕ್ಷೀಯ ಸಹಕಾರದ ಹಲವು ಪ್ರಮುಖ ಕ್ಷೇತ್ರಗಳಲ್ಲಿನ ಪ್ರಗತಿ ಪರಾಮರ್ಶೆ

ಭಾರತ ಮತ್ತು ಮಧ್ಯ ಏಷ್ಯಾ ನಡುವಿನ ಪುರಾತನ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ಬದ್ಧತೆ ಉಭಯ ನಾಯಕರಿಂದ ಪುನರುಚ್ಚಾರ

Posted On: 12 AUG 2025 7:06PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉಜ್ಬೇಕಿಸ್ತಾನ ಗಣರಾಜ್ಯದ ಅಧ್ಯಕ್ಷರಾದ ಮಾನ್ಯ ಶ್ರೀ ಶವ್ಕತ್ ಮಿರ್ಜಿಯೋಯೆವ್ ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.
 
ಭಾರತದ ಮುಂಬರುವ 79ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಪ್ರಧಾನಮಂತ್ರಿ ಮತ್ತು ದೇಶದ ಜನರಿಗೆ ಉಜ್ಬೇಕಿಸ್ತಾನ ಅಧ್ಯಕ್ಷರಾದ ಮಿರ್ಜಿಯೋಯೆವ್ ಅವರು ಆತ್ಮೀಯವಾಗಿ ಶುಭ ಹಾರೈಸಿದ್ದಾರೆ. 

ಉಭಯ ನಾಯಕರು ವ್ಯಾಪಾರ, ಸಂಪರ್ಕ, ಆರೋಗ್ಯ, ತಂತ್ರಜ್ಞಾನ, ಜನರ ನಡುವಿನ ಬಾಂಧವ್ಯ ಸೇರಿದಂತೆ ದ್ವಿಪಕ್ಷೀಯ ಸಹಕಾರದ ಹಲವು ಪ್ರಮುಖ ಕ್ಷೇತ್ರಗಳಲ್ಲಿನ ಪ್ರಗತಿ ಪರಾಮರ್ಶೆ ನಡೆಸಿದರು. 

ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ಬೆಳವಣಿಗೆಗಳ ಕುರಿತು ಉಭಯರು ಅಭಿಪ್ರಾಯ ವಿನಿಮಯ ಮಾಡಿಕೊಂಡರು ಹಾಗೂ ಭಾರತ ಮತ್ತು ಮಧ್ಯ ಏಷ್ಯಾ ನಡುವಿನ ಪ್ರಾಚೀನ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು.

ಎರಡೂ ದೇಶಗಳ ನಾಯಕರು ಪರಸ್ಪರ ಸಂಪರ್ಕದಲ್ಲಿರಲು ಸಮ್ಮತಿಸಿದರು.

 

*****
 


(Release ID: 2155879)