ಗೃಹ ವ್ಯವಹಾರಗಳ ಸಚಿವಾಲಯ
azadi ka amrit mahotsav

ಕೇಂದ್ರ ಗೃಹ ಮತ್ತು ಸಹಕಾರ ಖಾತೆ ಸಚಿವರಾದ ಶ್ರೀ ಅಮಿತ್ ಶಾ ಅವರು ಹರ್ ಘರ್ ತಿರಂಗಾ' ಅಭಿಯಾನದ ಅಡಿಯಲ್ಲಿ ಇಂದು ನವದೆಹಲಿಯ ತಮ್ಮ ನಿವಾಸದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದರು


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಪ್ರಾರಂಭವಾದ 'ಹರ್ ಘರ್ ತಿರಂಗಾ' ಅಭಿಯಾನವು ಇಂದು ದೇಶವನ್ನು ಏಕತೆಯ ಎಳೆಯಲ್ಲಿ ಬಂಧಿಸುವ ಮತ್ತು ದೇಶಭಕ್ತಿಯ ಭಾವನೆಯನ್ನು ಬಲಪಡಿಸುವ ಸಾಮೂಹಿಕ ಅಭಿಯಾನವಾಗಿ ಮಾರ್ಪಟ್ಟಿದೆ

ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರು ತಮ್ಮ ತ್ಯಾಗ, ತಪಸ್ಸು ಮತ್ತು ಸಮರ್ಪಣೆಯ ಮೂಲಕ ಸ್ವತಂತ್ರ ಭಾರತದ ಕನಸನ್ನು ಸಾಕಾರಗೊಳಿಸಿದ್ದಾರೆ, 140 ಕೋಟಿ ದೇಶವಾಸಿಗಳು ಅದನ್ನು ಅಭಿವೃದ್ಧಿ ಹೊಂದಿದ ಮತ್ತು ಅತ್ಯುತ್ತಮವಾಗಿಸಲು ನಿರ್ಧರಿಸಿದ್ದಾರೆ ಎಂಬುದನ್ನು ಈ ಅಭಿಯಾನ ತೋರಿಸುತ್ತದೆ

Posted On: 13 AUG 2025 11:08AM by PIB Bengaluru

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಇಂದು ನವದೆಹಲಿಯ ತಮ್ಮ ನಿವಾಸದಲ್ಲಿ 'ಹರ್ ಘರ್ ತಿರಂಗಾ' ಅಭಿಯಾನದ ಅಡಿಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಪ್ರಾರಂಭವಾದ 'ಹರ್ ಘರ್ ತಿರಂಗಾ' ಅಭಿಯಾನವು ಇಂದು ದೇಶವನ್ನು ಏಕತೆಯ ಎಳೆಯಲ್ಲಿ ಬಂಧಿಸುವ ಮತ್ತು ದೇಶಭಕ್ತಿಯ ಭಾವನೆಯನ್ನು ಬಲಪಡಿಸುವ ಸಾಮೂಹಿಕ ಅಭಿಯಾನವಾಗಿ ಮಾರ್ಪಟ್ಟಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಎಕ್ಸ್ ವೇದಿಕೆಯ ಪೋಸ್ಟ್ ನಲ್ಲಿ ತಿಳಿಸಿದ್ದಾರೆ. ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರು ತಮ್ಮ ತ್ಯಾಗ, ತಪಸ್ಸು ಮತ್ತು ಸಮರ್ಪಣೆಯ ಮೂಲಕ ಸ್ವತಂತ್ರ ಭಾರತದ ಕನಸನ್ನು ಸಾಕಾರಗೊಳಿಸಿದ್ದಾರೆ. 140 ಕೋಟಿ ದೇಶವಾಸಿಗಳು ಅದನ್ನು ಅಭಿವೃದ್ಧಿ ಹೊಂದಿದ ಮತ್ತು ಉತ್ತಮಗೊಳಿಸಲು ನಿರ್ಧರಿಸಿದ್ದಾರೆ ಎಂಬುದನ್ನು ಈ ಅಭಿಯಾನ ತೋರಿಸುತ್ತದೆ ಎಂದು ಗೃಹ ಸಚಿವರು ಹೇಳಿದರು.

 

 

*****

 


(Release ID: 2155973)