ಪ್ರಧಾನ ಮಂತ್ರಿಯವರ ಕಛೇರಿ
ರಾಜಸ್ಥಾನದ ದೌಸಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಪರಿಹಾರ ಘೋಷಣೆ
Posted On:
13 AUG 2025 4:24PM by PIB Bengaluru
ರಾಜಸ್ಥಾನದ ದೌಸಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಆದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿಗಳ ಪರಿಹಾರವನ್ನು ಘೋಷಿಸಿದ್ದಾರೆ.
ಪ್ರಧಾನಮಂತ್ರಿ ಕಚೇರಿ X ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ:
"ರಾಜಸ್ಥಾನದ ದೌಸಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿರುವುದು ತೀವ್ರ ದುಃಖ ತಂದಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ.
ಮೃತರ ಕುಟುಂಬದವರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) 2 ಲಕ್ಷ ರೂಪಾಯಿ ಪರಿಹಾರವನ್ನು ನೀಡಲಾಗುವುದು. ಗಾಯಗೊಂಡವರಿಗೆ 50,000 ರೂಪಾಯಿಗಳನ್ನು ನೀಡಲಾಗುವುದು: ಪ್ರಧಾನಮಂತ್ರಿ ಶ್ರೀ @narendramodi"
*****
(Release ID: 2156095)
Read this release in:
Manipuri
,
English
,
Urdu
,
Hindi
,
Marathi
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam