ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರದಲ್ಲಿ ಮೇಘಸ್ಫೋಟ ಮತ್ತು ಪ್ರವಾಹದಿಂದ ಬಾಧಿತರಾದವರಿಗೆ ಎಲ್ಲಾ ಸಾಧ್ಯ ಸಹಕಾರ ಮತ್ತು ಬೆಂಬಲ ನೀಡುವುದಾಗಿ ಪ್ರಧಾನಮಂತ್ರಿ ಭರವಸೆ

Posted On: 14 AUG 2025 4:50PM by PIB Bengaluru

ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಮೇಘಸ್ಫೋಟ ಮತ್ತು ನಂತರದ ಪ್ರವಾಹಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ವಿಪತ್ತಿನಿಂದ ಸಂಕಷ್ಟಕ್ಕೊಳಗಾದವರಿಗೆ ಸಕಾಲಿಕ ನೆರವು ನೀಡಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಅವರು ಭರವಸೆ ನೀಡಿದ್ದಾರೆ.

ಪ್ರಧಾನಮಂತ್ರಿಗಳು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ: 

"ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ನಲ್ಲಿ ಮೇಘಸ್ಫೋಟ ಮತ್ತು ಪ್ರವಾಹದಿಂದ ತೊಂದರೆಗೊಳಗಾದ ಎಲ್ಲರಿಗೂ ನನ್ನ ಬೆಂಬಲ ಮತ್ತು ಪ್ರಾರ್ಥನೆ/ಸಂತಾಪಗಳು. ಪರಿಸ್ಥಿತಿಯ ಬಗ್ಗೆ ಸೂಕ್ಷ್ಮವಾಗಿ ನಿಗಾ ವಹಿಸಲಾಗುತ್ತಿದೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ಪ್ರಗತಿಯಲ್ಲಿವೆ. ಅಗತ್ಯವಿರುವವರಿಗೆ ಸಾಧ್ಯವಿರುವ ಎಲ್ಲಾ ನೆರವು ನೀಡಲಾಗುವುದು."

 

 

*****

 


(Release ID: 2156608)