ಪ್ರಧಾನ ಮಂತ್ರಿಯವರ ಕಛೇರಿ
ನಾಗಾಲ್ಯಾಂಡ್ ರಾಜ್ಯಪಾಲರಾದ ಶ್ರೀ ಲಾ. ಗಣೇಶನ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
Posted On:
15 AUG 2025 8:28PM by PIB Bengaluru
ನಾಗಾಲ್ಯಾಂಡ್ ರಾಜ್ಯಪಾಲರಾದ ತಿರು ಲಾ. ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ. ಸೇವೆ ಮತ್ತು ರಾಷ್ಟ್ರ ನಿರ್ಮಾಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ನಿಷ್ಠಾವಂತ ರಾಷ್ಟ್ರೀಯವಾದಿ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಿರು ಲಾ. ಗಣೇಶನ್ ಅವರನ್ನು ಶ್ಲಾಘಿಸಿದರು.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಹೇಳಿದ್ದಾರೆ:
ನಾಗಾಲ್ಯಾಂಡ್ ರಾಜ್ಯಪಾಲರಾದ ತಿರು ಲಾ. ಗಣೇಶನ್ ಅವರ ನಿಧನದಿಂದ ನೋವಾಗಿದೆ. ಗಣೇಶನ್ ಅವರು ಸೇವೆ ಮತ್ತು ರಾಷ್ಟ್ರ ನಿರ್ಮಾಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ನಿಷ್ಠಾವಂತ ರಾಷ್ಟ್ರೀಯವಾದಿ ಎಂದು ಅವರನ್ನು ಸ್ಮರಿಸಲಾಗುತ್ತದೆ. ತಮಿಳುನಾಡಿನಾದ್ಯಂತ ಬಿ.ಜೆ.ಪಿಯನ್ನು ವಿಸ್ತರಿಸಲು ಅವರು ಬಹಳಷ್ಟು ಶ್ರಮಿಸಿದರು. ಅವರಿಗೆ ತಮಿಳು ಸಂಸ್ಕೃತಿಯ ಬಗ್ಗೆಯೂ ಆಳವಾದ ಒಲವಿತ್ತು. ನನ್ನ ಆಲೋಚನೆಗಳು ಅವರ ಕುಟುಂಬ ಮತ್ತು ಅಭಿಮಾನಿಗಳೊಂದಿಗೆ ಇವೆ. ಓಂ ಶಾಂತಿ."
“நாகாலாந்து ஆளுநர் திரு இல. கணேசன் அவர்களின் மறைவால் வேதனை அடைந்தேன். தேச சேவைக்கும், தேசத்தைச் சிறப்பாகக் கட்டமைக்கவும் தமது வாழ்க்கையை அர்ப்பணித்த ஒரு உண்மையான தேசியவாதியாக அவர் எப்போதும் நினைவுகூரப்படுவார். தமிழ்நாடு முழுவதும் பிஜேபி-யின் வளர்ச்சிக்கு அவர் கடுமையாக உழைத்தார். தமிழ் கலாச்சாரத்தின் மீது அவருக்கு மிகுந்த ஆர்வம் இருந்தது. எனது எண்ணங்கள் அவரது குடும்பத்தினருடனும் அவரது ஆதரவாளர்களுடனும் உள்ளன. ஓம் சாந்தி.”
*****
(Release ID: 2157026)