ಗೃಹ ವ್ಯವಹಾರಗಳ ಸಚಿವಾಲಯ
azadi ka amrit mahotsav

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್‌ ಶಾ ಅವರು, ಉಪರಾಷ್ಟ್ರಪತಿ ಚುನಾವಣೆಗೆ ಎನ್‌.ಡಿ.ಎ ಅಭ್ಯರ್ಥಿಯಾಗಿ ನಾಮನಿರ್ದೇಶನಗೊಂಡ ಮಹಾರಾಷ್ಟ್ರದ ರಾಜ್ಯಪಾಲ ಶ್ರೀ ಸಿ. ಪಿ. ರಾಧಾಕೃಷ್ಣನ್‌ ಅವರನ್ನು ಅಭಿನಂದಿಸಿದರು


ಸಂಸದೀಯ ಪಟುವಾಗಿ ಮತ್ತು ವಿವಿಧ ರಾಜ್ಯಗಳ ರಾಜ್ಯಪಾಲರಾಗಿ ಶ್ರೀ ಸಿ. ಪಿ. ರಾಧಾಕೃಷ್ಣನ್‌ ಅವರ ಪಾತ್ರಗಳು ಸಾಂವಿಧಾನಿಕ ಕರ್ತವ್ಯಗಳನ್ನು ಪರಿಣಾಮಕಾರಿಯಾಗಿ ಪೂರೈಸುವಲ್ಲಿ ಮಹತ್ವದ ಪಾತ್ರ ವಹಿಸಿವೆ

ಅವರ ಅಪಾರ ಅನುಭವ ಮತ್ತು ಜ್ಞಾನ ಮೇಲ್ಮನೆಯ ಪ್ರತಿಷ್ಠೆಯನ್ನು ಹೆಚ್ಚಿಸುತ್ತದೆ ಮತ್ತು ಹೊಸ ಮೈಲಿಗಲ್ಲುಗಳನ್ನು ಸಾಧಿಸುತ್ತದೆ ಎಂದು ನನಗೆ ಖಾತ್ರಿಯಿದೆ

ಈ ನಿರ್ಧಾರಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಪಕ್ಷ ದ ಸಂಸದೀಯ ಮಂಡಳಿಯ ಎಲ್ಲಾ ಸದಸ್ಯರಿಗೆ ಕೃತಜ್ಞತೆ ಸಲ್ಲಿಸುತ್ತೇನೆ

Posted On: 17 AUG 2025 9:48PM by PIB Bengaluru

ಕೇಂದ್ರ ಗೃಹ ಸಚಿವರು ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್‌ ಶಾ ಅವರು, ಉಪರಾಷ್ಟ್ರಪತಿ ಚುನಾವಣೆಗೆ ಎನ್‌.ಡಿ.ಎ ಅಭ್ಯರ್ಥಿಯಾಗಿ ನಾಮನಿರ್ದೇಶನಗೊಂಡಿರುವ ಮಹಾರಾಷ್ಟ್ರದ ರಾಜ್ಯಪಾಲ ಶ್ರೀ ಸಿ. ಪಿ. ರಾಧಾಕೃಷ್ಣನ್‌ ಅವರನ್ನು ಅಭಿನಂದಿಸಿದ್ದಾರೆ.

ಸಂಸದೀಯ ಪಟುವಾಗಿ ಮತ್ತು ವಿವಿಧ ರಾಜ್ಯಗಳ ರಾಜ್ಯಪಾಲರಾಗಿ ಶ್ರೀ ಸಿ. ಪಿ.ರಾಧಾಕೃಷ್ಣನ್‌ ಅವರ ಪಾತ್ರಗಳು ಸಾಂವಿಧಾನಿಕ ಕರ್ತವ್ಯಗಳನ್ನು ಪರಿಣಾಮಕಾರಿಯಾಗಿ ಪೂರೈಸುವಲ್ಲಿ ಮಹತ್ವದ ಪಾತ್ರ ವಹಿಸಿವೆ ಎಂದು ಶ್ರೀ ಅಮಿತ್‌ ಶಾ ಅವರು ‘ಎಕ್ಸ್‌’ ಕುರಿತ ಪೋಸ್ಟ್‌ ನಲ್ಲಿ ತಿಳಿಸಿದ್ದಾರೆ. ಅವರ ಅಪಾರ ಅನುಭವ ಮತ್ತು ಜ್ಞಾನ ಮೇಲ್ಮನೆಯ ಪ್ರತಿಷ್ಠೆಯನ್ನು ಹೆಚ್ಚಿಸುತ್ತದೆ ಮತ್ತು ಹೊಸ ಮೈಲಿಗಲ್ಲುಗಳನ್ನು ಸಾಧಿಸುತ್ತದೆ ಎಂದು ನನಗೆ ಖಾತ್ರಿಯಿದೆ. ಈ ನಿರ್ಧಾರಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಮತ್ತು ಪಕ್ಷದ ಸಂಸದೀಯ ಮಂಡಳಿಯ ಎಲ್ಲಾ ಸದಸ್ಯರಿಗೆ ಕೃತಜ್ಞತೆಗಳು,’’ ಎಂದು ಹೇಳಿದ್ದಾರೆ.

 

 

*****

 


(Release ID: 2157344)
Read this release in: English , Hindi