ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಹಾರಾಜ ಬೀರ್ ಬಿಕ್ರಮ್ ಕಿಶೋರ್ ಮಾಣಿಕ್ಯ ಬಹದ್ದೂರ್ ಅವರ ಜನ್ಮದಿನದಂದು ಪ್ರಧಾನಮಂತ್ರಿಗಳಿಂದ ಅವರಿಗೆ ಗೌರವ ನಮನ 

Posted On: 19 AUG 2025 11:54AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಜ ಬೀರ್ ಬಿಕ್ರಮ್ ಕಿಶೋರ್ ಮಾಣಿಕ್ಯ ಬಹದ್ದೂರ್ ಅವರ ಜನ್ಮದಿನದ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದರು. ತ್ರಿಪುರಾ ಅಭಿವೃದ್ಧಿಯಲ್ಲಿ ಮಹಾರಾಜ ಬೀರ್ ಬಿಕ್ರಮ್ ಕಿಶೋರ್ ಮಾಣಿಕ್ಯ ಬಹದ್ದೂರ್ ಅವರ ಮಾದರಿ ಪ್ರಯತ್ನಗಳಿಗಾಗಿ ಅವರು ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. ಸಾರ್ವಜನಿಕ ಸೇವೆಗಾಗಿ ಅವರ ಒಲವು, ಬಡವರ ಸಬಲೀಕರಣಕ್ಕಾಗಿ ಬದ್ಧತೆ ಮತ್ತು ಸಾಮಾಜದ ಔನ್ನತ್ಯಕ್ಕಾಗಿ ಅವರ ಸಮರ್ಪಣೆ ಸದಾ ಹೆಚ್ಚಿನ ಪ್ರೇರಣೆ ನೀಡಲಿದೆ ಎಂದು ಶ್ರೀ ಮೋದಿ ಅವರು ಅಭಿಪ್ರಾಯಪಟ್ಟಿದ್ದಾರೆ.

ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

"ಮಹಾರಾಜ ಬೀರ್ ಬಿಕ್ರಮ್ ಕಿಶೋರ್ ಮಾಣಿಕ್ಯ ಬಹದ್ದೂರ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರ ಸ್ಮರಣೆ. ತ್ರಿಪುರಾ ಅಭಿವೃದ್ಧಿಯಲ್ಲಿ ಅವರ ಅನುಕರಣೀಯ ಪ್ರಯತ್ನಗಳಿಗಾಗಿ ಅವರು ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸಾರ್ವಜನಿಕ ಸೇವೆಗಾಗಿನ ಅವರ ಒಲವು, ಬಡವರ ಸಬಲೀಕರಣಕ್ಕಾಗಿನ ಬದ್ಧತೆ ಮತ್ತು ಸಾಮಾಜಿಕ ಉನ್ನತಿಗಾಗಿ ಅವರ ಸಮರ್ಪಣೆ ನಮಗೆ ಹೆಚ್ಚಿನ ಪ್ರೇರಣೆ ನೀಡುತ್ತಲೇ ಇರಲಿದೆ. ಅವರ ದೂರದೃಷ್ಟಿಯ ಸಾಕಾರಕ್ಕೆ ಕೇಂದ್ರ ಸರ್ಕಾರ ಮತ್ತು ತ್ರಿಪುರಾ ಸರ್ಕಾರಗಳು ಅವಿರತವಾಗಿ ಶ್ರಮಿಸುತ್ತಿವೆ."

 

 

*****

 


(Release ID: 2157859)