ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಭಾರತದ 76ನೇ ಗಣರಾಜ್ಯೋತ್ಸವದ ಶುಭಾಶಯ ಕೋರಿದ ಥಾಯ್ಲೆಂಡ್ ಪ್ರಧಾನಮಂತ್ರಿ ಅವರಿಗೆ ಧನ್ಯವಾದ ಅರ್ಪಿಸಿದ ಪ್ರಧಾನಮಂತ್ರಿ

Posted On: 26 JAN 2025 10:20PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭಾರತದ 76ನೇ ಗಣರಾಜ್ಯೋತ್ಸವದ ಶುಭಾಶಯ ಕೋರಿದ್ದಕ್ಕಾಗಿ ಥಾಯ್ಲೆಂಡ್ ಪ್ರಧಾನಮಂತ್ರಿ ಶ್ರೀಮತಿ ಪೀಟೊಂಗ್ಟಾರ್ನ್ ಶಿನವಾತ್ರಾ ಅವರಿಗೆ ಧನ್ಯವಾದ ಅರ್ಪಿಸಿದರು.

ಈ ಸಂಬಂಧ ಎಕ್ಸ್ ಖಾತೆಯಲ್ಲಿ ಥಾಯ್ಲೆಂಡ್ ಪ್ರಧಾನಮಂತ್ರಿ ಅವರ ಪೋಸ್ಟ್ ಗೆ ಪ್ರತಿಕ್ರಿಯಿಸಿದ ಶ್ರೀ ನರೇಂದ್ರ ಮೋದಿ ಅವರು ಹೀಗೆ ಹೇಳಿದ್ದಾರೆ:

“ಭಾರತೀಯ ಗಣರಾಜ್ಯದ ವೈಭವಯುತ 75 ವರ್ಷಗಳನ್ನು ನಾವು ಆಚರಿಸುತ್ತಿರುವ ಸಂದರ್ಭದಲ್ಲಿ PM @inghin ಅವರಿಗೆ ನಿಮ್ಮ ಶುಭಾಶಯಗಳನ್ನು ಆಳವಾಗಿ ಪ್ರಶಂಸಿಸುತ್ತೇವೆ. ಥಾಯ್ಲೆಂಡ್  ಜತೆಗಿನ ನಮ್ಮ ಸಂಬಂಧವನ್ನು ನಾವು ಆಳವಾಗಿ ಗೌರವಿಸುತ್ತೇವೆ. ಪ್ರಾದೇಶಿಕ ಸಂಪರ್ಕ ಮತ್ತು ಜನರ ಸಂಪರ್ಕವನ್ನು ಹೆಚ್ಚಿಸುವಲ್ಲಿ ನಿರಂತರ ಸಹಕಾರವನ್ನು ಎದುರು ನೋಡುತ್ತಿದ್ದೇನೆ,’’ ಎಂದು ಹೇಳಿದ್ದಾರೆ.

 

 

*****

 


(Release ID: 2158741) Visitor Counter : 3