ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಅಧ್ಯಕ್ಷರಾದ ಮ್ಯಾಕ್ರನ್ ಅವರಿಂದ ದೂರವಾಣಿ ಕರೆ
ಉಕ್ರೇನ್ ಮತ್ತು ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಘರ್ಷಣೆಗಳನ್ನು ಶಾಂತಿಯುತವಾಗಿ ಪರಿಹರಿಸುವ ಪ್ರಯತ್ನಗಳ ಕುರಿತು ನಾಯಕರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು
ಶಾಂತಿ ಮತ್ತು ಸ್ಥಿರತೆಯನ್ನು ಶೀಘ್ರವಾಗಿ ಮರಳಿ ತರಲು ಭಾರತದ ನಿರಂತರ ಬೆಂಬಲವನ್ನು ಪ್ರಧಾನಮಂತ್ರಿ ಮೋದಿ ಪುನರುಚ್ಚರಿಸಿದರು
ಭಾರತ ಮತ್ತು ಫ್ರಾನ್ಸ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳ ಕುರಿತು ಉಭಯ ನಾಯಕರು ಚರ್ಚಿಸಿದರು
Posted On:
21 AUG 2025 6:30PM by PIB Bengaluru
ಇಂದು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಫ್ರೆಂಚ್ ಗಣರಾಜ್ಯದ ಘನತೆವೆತ್ತ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರಿಂದ ದೂರವಾಣಿ ಕರೆ ಬಂದಿತು.
ಉಕ್ರೇನ್ ಮತ್ತು ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಸಂಘರ್ಷಗಳ ಶಾಂತಿಯುತ ಪರಿಹಾರಕ್ಕಾಗಿ ನಡೆಯುತ್ತಿರುವ ಪ್ರಯತ್ನಗಳ ಕುರಿತು ಉಭಯ ನಾಯಕರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.
ವಾಷಿಂಗ್ಟನ್ ನಲ್ಲಿ ಯುರೋಪ್, ಅಮೆರಿಕ ಮತ್ತು ಉಕ್ರೇನ್ ನಾಯಕರ ನಡುವೆ ಇತ್ತೀಚೆಗೆ ನಡೆದ ಸಭೆಗಳ ಕುರಿತು ಅಧ್ಯಕ್ಷ ಮ್ಯಾಕ್ರನ್ ಅಭಿಪ್ರಾಯಗಳನ್ನು ಹಂಚಿಕೊಂಡರು. ಗಾಜಾದಲ್ಲಿನ ಪರಿಸ್ಥಿತಿಯ ಕುರಿತು ಕೂಡ ಅವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.
ಸಂಘರ್ಷಗಳ ಶಾಂತಿಯುತ ಪರಿಹಾರ ಹಾಗು ಶಾಂತಿ ಮತ್ತು ಸ್ಥಿರತೆಯ ಶೀಘ್ರ ಪುನಃಸ್ಥಾಪನೆಗೆ ಭಾರತದ ನಿರಂತರ ಬೆಂಬಲವನ್ನು ಪ್ರಧಾನಮಂತ್ರಿ ಮೋದಿ ಅವರು ಪುನರುಚ್ಚರಿಸಿದರು.
ವ್ಯಾಪಾರ, ರಕ್ಷಣೆ, ನಾಗರಿಕ ಪರಮಾಣು ಸಹಕಾರ, ತಂತ್ರಜ್ಞಾನ ಮತ್ತು ಇಂಧನ ಕ್ಷೇತ್ರಗಳು ಸೇರಿದಂತೆ ದ್ವಿಪಕ್ಷೀಯ ಸಹಕಾರ ಕಾರ್ಯಸೂಚಿಯಲ್ಲಿನ ಪ್ರಗತಿಯನ್ನು ನಾಯಕರು ಪರಿಶೀಲಿಸಿದರು. ಭಾರತ ಮತ್ತು ಫ್ರಾನ್ಸ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸಲು ಮತ್ತು 2026 ಅನ್ನು 'ನಾವೀನ್ಯತೆಯ ವರ್ಷ'ವಾಗಿ ಸೂಕ್ತ ರೀತಿಯಲ್ಲಿ ಆಚರಿಸಲು ಜಂಟಿ ಬದ್ಧತೆಯನ್ನು ಅವರು ಪುನರುಚ್ಚರಿಸಿದರು.
ಭಾರತ ಮತ್ತು ಯೂರೋಪಿಯನ್ ಯೂನಿಯನ್ ನಡುವಿನ ಮುಕ್ತ ವ್ಯಾಪಾರ ಒಪ್ಪಂದದ ಶೀಘ್ರ ತೀರ್ಮಾನಕ್ಕೆ ಅಧ್ಯಕ್ಷರಾದ ಮ್ಯಾಕ್ರನ್ ಬೆಂಬಲವನ್ನು ವ್ಯಕ್ತಪಡಿಸಿದರು.
ಎಲ್ಲಾ ವಿಷಯಗಳ ಬಗ್ಗೆ ಪರಸ್ಪರ ಸಂಪರ್ಕದಲ್ಲಿರಲು ಉಭಯ ನಾಯಕರು ಒಪ್ಪಿಕೊಂಡರು.
*****
(Release ID: 2159566)
Read this release in:
Malayalam
,
English
,
Urdu
,
Marathi
,
Hindi
,
Manipuri
,
Assamese
,
Punjabi
,
Gujarati
,
Odia
,
Tamil
,
Telugu