ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರ ಜಪಾನ್ ಮತ್ತು ಚೀನಾ ದೇಶಗಳ ಭೇಟಿಯ ಮುನ್ನಾ ದಿನದಂದು ನೀಡಿರುವ ನಿರ್ಗಮನ ಹೇಳಿಕೆ 

Posted On: 28 AUG 2025 8:41PM by PIB Bengaluru

ಪ್ರಧಾನಮಂತ್ರಿ ಶ್ರೀ ಶಿಗೇರು ಇಶಿಬಾ ಅವರ ಆಹ್ವಾನದ ಮೇರೆಗೆ, ನಾನು 15ನೇ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸುವುದಕ್ಕಾಗಿ ಜಪಾನ್‌ ದೇಶಕ್ಕೆ ಎರಡು ದಿನಗಳ ಭೇಟಿಯನ್ನು ಕೈಗೊಳ್ಳುತ್ತಿದ್ದೇನೆ.

ನನ್ನ ಭೇಟಿಯ ಸಮಯದಲ್ಲಿ, ಕಳೆದ ಹನ್ನೊಂದು ವರ್ಷಗಳಲ್ಲಿ ಆಗಿರುವ ಸ್ಥಿರತೆ ಕುರಿತು ಮತ್ತು ಗಮನಾರ್ಹ ಪ್ರಗತಿಯನ್ನು ಸಾಧಿಸಿರುವ ನಮ್ಮ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯಲ್ಲಿ ಮುಂದಿನ ಹಂತವನ್ನು ರೂಪಿಸುವತ್ತ ನಾವು ಗಮನಹರಿಸುತ್ತೇವೆ. ನಮ್ಮ ಸಹಯೋಗಕ್ಕೆ ಹೊಸ ರೆಕ್ಕೆ ಹಾಗೂ ಆಯಾಮಗಳನ್ನು ನೀಡಲು, ನಮ್ಮ ಆರ್ಥಿಕ ಮತ್ತು ಹೂಡಿಕೆ ಸಂಬಂಧಗಳ ವ್ಯಾಪ್ತಿ ಮತ್ತು ಮಹತ್ವಾಕಾಂಕ್ಷೆಯನ್ನು ವಿಸ್ತರಿಸಲು ಮತ್ತು ಕೃತಕ ಬುದ್ಧಿಮತ್ತೆ (ಎಐ)ಮತ್ತು ಸೆಮಿಕಂಡಕ್ಟರ್‌ ಗಳು ಸೇರಿದಂತೆ ಹೊಸ ಮತ್ತು ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಸಹಕಾರವನ್ನು ಮುನ್ನಡೆಸಲು ನಾವು ಪ್ರಯತ್ನಿಸುತ್ತೇವೆ. ಈ ಭೇಟಿಯು ನಮ್ಮ ನಾಗರಿಕತೆಯ ಪರಸ್ಪರ ಬಂಧಗಳು ಮತ್ತು ನಮ್ಮ ಜನರನ್ನು ಸಂಪರ್ಕಿಸುವ ಸಾಂಸ್ಕೃತಿಕ ಸಂಬಂಧಗಳನ್ನು ಬಲಪಡಿಸಲು ಒಂದು ಅವಕಾಶವಾಗಿದೆ.

ಜಪಾನ್‌ ದೇಶದ ಸಂದರ್ಶನ ಮುಗಿದ ನಂತರ, ಚೀನಾ ದೇಶದ ಅಧ್ಯಕ್ಷ ಶ್ರೀ ಕ್ಸಿ ಜಿನ್‌ಪಿಂಗ್ ಅವರು ನೀಡಿದ ಆಹ್ವಾನದ ಮೇರೆಗೆ, ನಾನು ಚೀನಾದ ಟಿಯಾಂಜಿನ್‌ ನಲ್ಲಿ ನಡೆಯುವ ಶಾಂಘೈ ಸಹಕಾರ ಸಂಸ್ಥೆಯ ಶೃಂಗಸಭೆಯಲ್ಲಿ ಭಾಗವಹಿಸಲು ಚೀನಾಕ್ಕೆ ಪ್ರಯಾಣಿಸುತ್ತೇನೆ. 

ಭಾರತವು ಎಸ್.ಸಿ.ಒ. ಒಕ್ಕೂಟದ ಸಕ್ರಿಯ ಮತ್ತು ರಚನಾತ್ಮಕ ಸದಸ್ಯ ದೇಶವಾಗಿದೆ. ನಮ್ಮ ಅಧ್ಯಕ್ಷತೆಯಲ್ಲಿ, ನಾವು ಹೊಸ ಆಲೋಚನೆಗಳನ್ನು ಪರಿಚಯಿಸಿದ್ದೇವೆ ಮತ್ತು ನಾವೀನ್ಯತೆ, ಆರೋಗ್ಯ ಮತ್ತು ಸಾಂಸ್ಕೃತಿಕ ವಿನಿಮಯ ಕ್ಷೇತ್ರಗಳಲ್ಲಿ ಸಹಯೋಗವನ್ನು ಪ್ರಾರಂಭಿಸಿದ್ದೇವೆ.  ಹಂಚಿಕೆಯ ಸವಾಲುಗಳನ್ನು ಪರಿಹರಿಸಲು ಮತ್ತು ಪ್ರಾದೇಶಿಕ ಸಹಕಾರವನ್ನು ಗಾಢವಾಗಿಸಲು ಎಸ್.ಸಿ.ಒ. ಒಕ್ಕೂಟದ ಇತರ ಸದಸ್ಯ ದೇಶಗಳೊಂದಿಗೆ ಕೆಲಸ ಮಾಡಲು ಭಾರತ ಬದ್ಧವಾಗಿದೆ. ಶೃಂಗಸಭೆಯ ಹೊರತಾಗಿ ಅಧ್ಯಕ್ಷ ಶ್ರೀ ಕ್ಸಿ ಜಿನ್‌ಪಿಂಗ್, ಅಧ್ಯಕ್ಷ ಶ್ರೀ ಪುಟಿನ್ ಮತ್ತು ಇತರ ನಾಯಕರನ್ನು ಈ ಸಂದರ್ಭದಲ್ಲಿ ಭೇಟಿ ಮಾಡಲು ನಾನು ಅವಕಾಶ ಎದುರು ನೋಡುತ್ತಿದ್ದೇನೆ.

ಜಪಾನ್ ಮತ್ತು ಚೀನಾ ದೇಶಗಳಿಗೆ ನನ್ನ ಭೇಟಿಯು ನಮ್ಮ ರಾಷ್ಟ್ರೀಯ ಹಿತಾಸಕ್ತಿಗಳು ಮತ್ತು ಆದ್ಯತೆಗಳನ್ನು ಮತ್ತಷ್ಟು ಹೆಚ್ಚಿಸುತ್ತದೆ ಮತ್ತು ಪ್ರಾದೇಶಿಕ ಮತ್ತು ಜಾಗತಿಕ ಶಾಂತಿ, ಭದ್ರತೆ ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಮುನ್ನಡೆಸುವಲ್ಲಿ ಫಲಪ್ರದ ಸಹಕಾರವನ್ನು ನಿರ್ಮಿಸಲು ಕೊಡುಗೆ ನೀಡುತ್ತದೆ ಎಂದು ನನಗೆ ಬಹಳಷ್ಟು ವಿಶ್ವಾಸವಿದೆ.

 

*****
 


(Release ID: 2161694) Visitor Counter : 52