ಪ್ರಧಾನ ಮಂತ್ರಿಯವರ ಕಛೇರಿ
ಉಕ್ರೇನ್ ಅಧ್ಯಕ್ಷರಾದ ಝೆಲೆನ್ಸ್ಕಿ ಅವರೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತುಕತೆ
ಉಕ್ರೇನ್ ಗೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಅಧ್ಯಕ್ಷರಾದ ಝೆಲೆನ್ಸ್ಕಿ ಅವರಿಂದ ಅಭಿಪ್ರಾಯ ಹಂಚಿಕೆ
ಸಂಘರ್ಷದ ಶಾಂತಿಯುತ ಇತ್ಯರ್ಥಕ್ಕೆ ಭಾರತದ ಸ್ಥಿರ ನಿಲುವು ಮತ್ತು ಶೀಘ್ರ ಶಾಂತಿ ಪುನರ್ ಸ್ಥಾಪನೆ ಪ್ರಯತ್ನಗಳಿಗೆ ಬೆಂಬಲದ ಬಗ್ಗೆ ಪ್ರಧಾನಮಂತ್ರಿ ಪುನರುಚ್ಚಾರ
ಭಾರತ-ಉಕ್ರೇನ್ ದ್ವಿಪಕ್ಷೀಯ ಪಾಲುದಾರಿಕೆಯನ್ನು ಗಾಢಗೊಳಿಸುವ ಬದ್ಧತೆಯನ್ನು ಪುನರುಚ್ಚರಿಸಿದ ನಾಯಕರು
Posted On:
30 AUG 2025 7:49PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉಕ್ರೇನ್ ಅಧ್ಯಕ್ಷರಾದ ಮಾನ್ಯ ಶ್ರೀ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಇಂದು ದೂರವಾಣಿ ಮುಖಾಂತರ ಸಂಭಾಷಣೆ ನಡೆಸಿದರು.
ಉಕ್ರೇನ್ ಗೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳ ಕುರಿತು ಅಧ್ಯಕ್ಷ ಝೆಲೆನ್ಸ್ಕಿ ಅವರು ತಮ್ಮ ನಿಲುವನ್ನು ಹಂಚಿಕೊಂಡರು.
ಪ್ರಧಾನಮಂತ್ರಿ ಅವರು ಅಧ್ಯಕ್ಷ ಝೆಲೆನ್ಸ್ಕಿ ಅವರಿಗೆ ಧನ್ಯವಾದ ಅರ್ಪಿಸಿದರು ಮತ್ತು ಸಂಘರ್ಷದ ಶಾಂತಿಯುತ ಇತ್ಯರ್ಥಕ್ಕೆ ಭಾರತದ ದೃಢ ಮತ್ತು ಸ್ಥಿರವಾದ ನಿಲುವನ್ನು ಪುನರುಚ್ಚರಿಸುತ್ತಾ ಶೀಘ್ರವಾಗಿ ಶಾಂತಿ ಪುನಃಸ್ಥಾಪಿಸುವ ಗುರಿಯನ್ನು ಹೊಂದಿರುವ ಪ್ರಯತ್ನಗಳಿಗೆ ಬೆಂಬಲ ನೀಡುವುದಾಗಿ ತಿಳಿಸಿದರು. ಈ ನಿಟ್ಟಿನಲ್ಲಿ ಎಲ್ಲ ಸಾಧ್ಯ ನೆರವು ನೀಡುವ ಭಾರತದ ಬದ್ಧತೆಯನ್ನು ಪ್ರಧಾನಮಂತ್ರಿ ಪುನರುಚ್ಚರಿಸಿದರು.
ಭಾರತ-ಉಕ್ರೇನ್ ದ್ವಿಪಕ್ಷೀಯ ಪಾಲುದಾರಿಕೆಯಲ್ಲಿನ ಪ್ರಗತಿಯನ್ನು ಎರಡೂ ದೇಶಗಳ ನಾಯಕರು ಪರಿಶೀಲಿಸಿದರು ಹಾಗೂ ಪರಸ್ಪರ ಹಿತಾಸಕ್ತಿಯ ಎಲ್ಲಾ ಕ್ಷೇತ್ರಗಳಲ್ಲಿ ಸಹಕಾರವನ್ನು ಮತ್ತಷ್ಟು ವರ್ಧಿಸುವ ಮಾರ್ಗಗಗಳ ಬಗ್ಗೆ ಚರ್ಚಿಸಿದರು.
ಪರಸ್ಪರ ಸಂಪರ್ಕದಲ್ಲಿರಲು ಉಭಯರು ಸಮ್ಮತಿಸಿದರು.
*****
(Release ID: 2162381)
Visitor Counter : 20
Read this release in:
Odia
,
English
,
Urdu
,
Marathi
,
Hindi
,
Manipuri
,
Bengali
,
Assamese
,
Punjabi
,
Gujarati
,
Tamil
,
Telugu
,
Malayalam