ರಾಷ್ಟ್ರಪತಿಗಳ ಕಾರ್ಯಾಲಯ
ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಿಗೆ ಸೆಪ್ಟೆಂಬರ್ 1 ರಿಂದ 3 ರವರೆಗೆ ಭಾರತದ ರಾಷ್ಟ್ರಪತಿಗಳ ಭೇಟಿ
Posted On:
31 AUG 2025 5:36PM by PIB Bengaluru
ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು 2025ರ ಸೆಪ್ಟೆಂಬರ್ 1 ರಿಂದ 3 ರವರೆಗೆ ಕರ್ನಾಟಕ ಮತ್ತು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ.
ಕರ್ನಾಟಕದ ಮೈಸೂರಿನಲ್ಲಿರುವ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ (AIISH) ಯ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಸೆಪ್ಟೆಂಬರ್ 1 ರಂದು ರಾಷ್ಟ್ರಪತಿಗಳು ಭಾಗಿಯಾಗಲಿದ್ದಾರೆ.
ಸೆಪ್ಟೆಂಬರ್ 2 ರಂದು ತಮಿಳುನಾಡಿನ ಚೆನ್ನೈನಲ್ಲಿ ಸಿಟಿ ಯೂನಿಯನ್ ಬ್ಯಾಂಕಿನ 120 ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ರಾಷ್ಟ್ರಪತಿ ಪಾಲ್ಗೊಳ್ಳಲಿದ್ದಾರೆ.
ರಾಷ್ಟ್ರಪತಿ ಮುರ್ಮು ಅವರು ಸೆಪ್ಟೆಂಬರ್ 3 ರಂದು ತಿರುವರೂರಿನಲ್ಲಿ ತಮಿಳುನಾಡಿನ ಕೇಂದ್ರೀಯ ವಿಶ್ವವಿದ್ಯಾಲಯದ 10 ನೇ ಘಟಿಕೋತ್ಸವ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
****
(Release ID: 2162519)
Visitor Counter : 2