ಪ್ರಧಾನ ಮಂತ್ರಿಯವರ ಕಛೇರಿ
ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೂಕಂಪದಲ್ಲಿ ಮಡಿದವರಿಗೆ ಪ್ರಧಾನಮಂತ್ರಿ ಸಂತಾಪ
Posted On:
01 SEP 2025 2:16PM by PIB Bengaluru
ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೂಕಂಪದಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿ ಮೋದಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ:
"ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೂಕಂಪದಿಂದ ಉಂಟಾದ ಜೀವಹಾನಿಯಿಂದ ತೀವ್ರ ದುಃಖಿತನಾಗಿದ್ದೇನೆ. ಈ ಕಷ್ಟದ ಸಮಯದಲ್ಲಿ ನಮ್ಮ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಮೃತರ ಕುಟುಂಬಗಳೊಂದಿಗೆ ಇವೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾವು ಹಾರೈಸುತ್ತೇವೆ. ಸಂತ್ರಸ್ತರಿಗೆ ಅಗತ್ಯವಿರುವ ಎಲ್ಲ ಮಾನವೀಯ ನೆರವು ಮತ್ತು ಪರಿಹಾರವನ್ನು ಒದಗಿಸಲು ಭಾರತ ಸಿದ್ಧವಾಗಿದೆ."
*****
(Release ID: 2162929)
Visitor Counter : 2
Read this release in:
Malayalam
,
English
,
Urdu
,
Marathi
,
Hindi
,
Bengali-TR
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu