ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಜರ್ಮನಿಯ ವಿದೇಶಾಂಗ ಸಚಿವರನ್ನು ಪ್ರಧಾನಮಂತ್ರಿ ಭೇಟಿಯಾದರು

Posted On: 03 SEP 2025 8:40PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜರ್ಮನಿಯ ವಿದೇಶಾಂಗ ಸಚಿವರಾದ ಜೋಹಾನ್ ವಾಡೆಫುಲ್ ಅವರನ್ನು ಭೇಟಿಯಾದರು. "ಭಾರತ ಮತ್ತು ಜರ್ಮನಿ 25 ವರ್ಷಗಳ ಕಾರ್ಯತಂತ್ರದ ಸಹಭಾಗಿತ್ವವನ್ನು ಆಚರಿಸುತ್ತಿವೆ. ರೋಮಾಂಚಕ ಪ್ರಜಾಪ್ರಭುತ್ವಗಳು ಮತ್ತು ಪ್ರಮುಖ ಆರ್ಥಿಕತೆಗಳಾಗಿ, ವ್ಯಾಪಾರ, ತಂತ್ರಜ್ಞಾನ, ನಾವೀನ್ಯತೆ, ಸುಸ್ಥಿರತೆ, ಉತ್ಪಾದನೆ ಮತ್ತು ಚಲನಶೀಲತೆಯಲ್ಲಿ ಪರಸ್ಪರ ಲಾಭದಾಯಕ ಸಹಕಾರವನ್ನು ಹೆಚ್ಚಿಸಲು ನಾವು ಅಪಾರ ಸಾಮರ್ಥ್ಯವನ್ನು ಕಾಣುತ್ತೇವೆ "ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು.

ಪ್ರಧಾನಮಂತ್ರಿ ಅವರು  ತಮ್ಮ ಎಕ್ಸ್ ಖಾತೆಯಲ್ಲಿ  ಹೀಗೆ ಪೋಸ್ಟ್ ಮಾಡಿದ್ದಾರೆ:

"ಜರ್ಮನಿಯ ವಿದೇಶಾಂಗ ಸಚಿವರಾದ ಜೋಹಾನ್ ವಾಡೆಫುಲ್ ಅವರನ್ನು ಭೇಟಿ ಮಾಡಿ ಸಂತೋಷವಾಗಿದೆ. ಭಾರತ ಮತ್ತು ಜರ್ಮನಿ 25 ವರ್ಷಗಳ ವ್ಯೂಹಾತ್ಮಕ ಪಾಲುದಾರಿಕೆಯನ್ನು ಆಚರಿಸುತ್ತಿವೆ. ರೋಮಾಂಚಕ ಪ್ರಜಾಪ್ರಭುತ್ವಗಳು ಮತ್ತು ಪ್ರಮುಖ ಆರ್ಥಿಕತೆಗಳಾಗಿ, ವ್ಯಾಪಾರ, ತಂತ್ರಜ್ಞಾನ, ನಾವೀನ್ಯತೆ, ಸುಸ್ಥಿರತೆ, ಉತ್ಪಾದನೆ ಮತ್ತು ಚಲನಶೀಲತೆಯಲ್ಲಿ ಪರಸ್ಪರ ಲಾಭದಾಯಕ ಸಹಕಾರವನ್ನು ಹೆಚ್ಚಿಸಲು ನಾವು ಅಪಾರ ಸಾಮರ್ಥ್ಯವನ್ನು ಕಾಣುತ್ತೇವೆ. ನಾವು ಬಹುಧ್ರುವೀಯ ಜಗತ್ತು, ಶಾಂತಿ ಮತ್ತು ವಿಶ್ವಸಂಸ್ಥೆಯ ಸುಧಾರಣೆಗಳ ದೃಷ್ಟಿಕೋನವನ್ನು ಹಂಚಿಕೊಳ್ಳುತ್ತೇವೆ. ಭಾರತಕ್ಕೆ ಶೀಘ್ರ ಭೇಟಿ ನೀಡುವಂತೆ ಜರ್ಮನಿಯ ಚಾನ್ಸೆಲರ್ ಅವರಿಗೆ ನನ್ನ ಪುನಃ ಆಹ್ವಾನವನ್ನು  ನೀಡಿದ್ದೇನೆ."

 

****


(Release ID: 2163583) Visitor Counter : 2