ಪ್ರಧಾನ ಮಂತ್ರಿಯವರ ಕಛೇರಿ
ಪ್ರತಿಯೊಬ್ಬ ಭಾರತೀಯ ನಾಗರಿಕರಿಗೂ ಕೈಗೆಟುಕುವ ಮತ್ತು ಸುಲಭವಾಗಿ ಲಭ್ಯವಾಗುವ ಆರೋಗ್ಯ ಸೇವೆಯನ್ನು ನೀಡುವ ಸರ್ಕಾರದ ಅಚಲ ಬದ್ಧತೆಯನ್ನು ಪ್ರಧಾನಮಂತ್ರಿ ಅವರು ಪುನರುಚ್ಚರಿಸಿದ್ದಾರೆ
Posted On:
04 SEP 2025 8:27PM by PIB Bengaluru
ಪ್ರತಿಯೊಬ್ಬ ಭಾರತೀಯ ನಾಗರಿಕರಿಗೂ ಕೈಗೆಟುಕುವ ಮತ್ತು ಸುಲಭವಾಗಿ ಲಭ್ಯವಾಗುವ ಆರೋಗ್ಯ ಸೇವೆಯನ್ನು ನೀಡುವ ಸರ್ಕಾರದ ಅಚಲ ಬದ್ಧತೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪುನರುಚ್ಚರಿಸಿದ್ದಾರೆ. ಜನೌಷಧಿ ಕೇಂದ್ರಗಳು ಮತ್ತು ಆಯುಷ್ಮಾನ್ ಭಾರತ್‌ನಂತಹ ಪರಿವರ್ತನಾ ಉಪಕ್ರಮಗಳ ಆಧಾರದ ಮೇಲೆ, ಸರ್ಕಾರವು ಈಗ #NextGenGST ಸುಧಾರಣೆಗಳ ಅಡಿಯಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ.
ಎಕ್ಸ ನಲ್ಲಿ ಡಾ. ಸುಮೀತ್ ಶಾ ಅವರ ಪೋಸ್ಟ್ ಗೆ ಪ್ರತಿಕ್ರಿಯಿಸಿದ ಶ್ರೀ ಮೋದಿ ಅವರು ಹೀಗೆ ಹೇಳಿದ್ದಾರೆ:
“ಪ್ರತಿಯೊಬ್ಬ ಭಾರತೀಯರಿಗೂ ಕೈಗೆಟುಕುವ ಆರೋಗ್ಯ ಸೇವೆಯನ್ನು ನೀಡುವುದು ನಮ್ಮ ಧ್ಯೇಯವಾಗಿದೆ.
ಜನೌಷಧಿ ಕೇಂದ್ರಗಳಿಂದ ಆಯುಷ್ಮಾನ್ ಭಾರತ್‌ವರೆಗೆ, ಮತ್ತು ಈಗ 33 ಅತ್ಯವಶ್ಯಕವಾದ ಜೀವ ಉಳಿಸುವ ಔಷಧಿಗಳ ಮೇಲೆ ಶೂನ್ಯ ತೆರಿಗೆ ಸೇರಿದಂತೆ ಅಗತ್ಯ ಆರೋಗ್ಯ ಉತ್ಪನ್ನಗಳ ಮೇಲೆ ಕಡಿಮೆ GST ಯೊಂದಿಗೆ, ಉತ್ತಮ ಗುಣಮಟ್ಟದ ಆರೋಗ್ಯ ಸೇವೆಯನ್ನು ಎಲ್ಲರಿಗೂ ಹೆಚ್ಚು ಸುಲಭವಾಗಿ ಕೈಗೆಟುಕುವಂತೆ ಮಾಡುವ ನಮ್ಮ ಪ್ರಯಾಣವನ್ನು ನಾವು ಮುಂದುವರೆಸಿದ್ದೇವೆ."
#NextGenGST”
*****
(Release ID: 2164018)
Visitor Counter : 2
Read this release in:
Bengali
,
Odia
,
English
,
Urdu
,
Marathi
,
Hindi
,
Manipuri
,
Assamese
,
Punjabi
,
Gujarati
,
Tamil
,
Telugu
,
Malayalam