ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಶಿಕ್ಷಕರ ದಿನದಂದು ಎಲ್ಲರಿಗೂ ಶುಭ ಕೋರಿದ ಪ್ರಧಾನಮಂತ್ರಿ

प्रविष्टि तिथि: 05 SEP 2025 8:36AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಿಕ್ಷಕರ ದಿನವಾದ ಇಂದು ಎಲ್ಲರಿಗೂ ಶುಭಾಶಯಗಳನ್ನು ತಿಳಿಸಿದ್ದಾರೆ. ಎಳೆ ಮನಸ್ಸುಗಳನ್ನು ಪೋಷಿಸುವಲ್ಲಿ ಶಿಕ್ಷಕರ ಸಮರ್ಪಣೆ ಪ್ರಬಲವಾದ ಮತ್ತು ಉಜ್ವಲ ಭವಿಷ್ಯದ ಅಡಿಪಾಯವಾಗಿದೆ ಎಂದು ಪ್ರಧಾನಮಂತ್ರಿ ಅವರು ಹೇಳಿದ್ದಾರೆ. "ವಿಶಿಷ್ಟ ವಿದ್ವಾಂಸ ಮತ್ತು ಶಿಕ್ಷಕರಾದ ಡಾ. ಎಸ್. ರಾಧಾಕೃಷ್ಣನ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರ ಜೀವನ ಮತ್ತು ಆಲೋಚನೆಗಳನ್ನು ನಾವು ಸ್ಮರಿಸುತ್ತೇವೆ" ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಪ್ರಧಾನಮಂತ್ರಿ ಅವರು ಎಕ್ಸ ನಲ್ಲಿ ಹೀಗೆ ಟ್ವೀಟ್ ಮಾಡಿದ್ದಾರೆ:

"ಎಲ್ಲರಿಗೂ, ವಿಶೇಷವಾಗಿ ಎಲ್ಲಾ ಶ್ರಮಶೀಲ ಶಿಕ್ಷಕರಿಗೆ #ಶಿಕ್ಷಕರ ದಿನದ ಶುಭಾಶಯಗಳು! ಎಳೆ ಮನಸ್ಸುಗಳನ್ನು ಪೋಷಿಸುವಲ್ಲಿ ಶಿಕ್ಷಕರ ಸಮರ್ಪಣೆ ಬಲವಾದ ಮತ್ತು ಉಜ್ವಲ ಭವಿಷ್ಯದ ಅಡಿಪಾಯವಾಗಿದೆ. ಅವರ ಬದ್ಧತೆ ಮತ್ತು ಸಹಾನುಭೂತಿ ಗಮನಾರ್ಹವಾಗಿದೆ. ಗಣ್ಯ ವಿದ್ವಾಂಸ ಮತ್ತು ಶಿಕ್ಷಕರಾದ ಡಾ. ಎಸ್. ರಾಧಾಕೃಷ್ಣನ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರ ಜೀವನ ಮತ್ತು ಆಲೋಚನೆಗಳನ್ನು ನಾವು ಸ್ಮರಿಸುತ್ತೇವೆ."

 

 

 

****


(रिलीज़ आईडी: 2164329) आगंतुक पटल : 25
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Bengali , Assamese , Punjabi , Gujarati , Odia , Tamil , Telugu , Malayalam