ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಜೆರುಸಲೆಮ್‌ನಲ್ಲಿ ಭೀಕರ ಭಯೋತ್ಪಾದಕ ದಾಳಿಗೆ ಪ್ರಧಾನಮಂತ್ರಿ ತೀವ್ರ ಖಂಡನೆ

प्रविष्टि तिथि: 08 SEP 2025 9:23PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜೆರುಸಲೇಮ್‌ನಲ್ಲಿ ಅಮಾಯಕ ನಾಗರಿಕರ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸಿದ್ದಾರೆ.

ಭಾರತವು ಎಲ್ಲಾ ರೀತಿಯ ಭಯೋತ್ಪಾದನೆ ಮತ್ತು ಅಭಿವ್ಯಕ್ತಿಗಳನ್ನು ಖಂಡಿಸುತ್ತದೆ ಮತ್ತು ಭಯೋತ್ಪಾದನೆಯ ಬಗ್ಗೆ ಶೂನ್ಯ ಸಹಿಷ್ಣುತೆ ನೀತಿ ಮೇಲೆ ದೃಢವಾಗಿ ನಿಂತಿದೆ ಎಂದು ಹೇಳಿದ್ದಾರೆ.

ಪ್ರಧಾನಮಂತ್ರಿ ಎಕ್ಸ್ ಖಾತೆಯಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

"ಇಂದು ಜೆರುಸಲೇಮ್‌ನಲ್ಲಿ ಅಮಾಯಕ ನಾಗರಿಕರ ಮೇಲೆ ನಡೆದ ಘೋರ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸುತ್ತೇವೆ. ಘಟನೆಯಲ್ಲಿ ಮೃತಪಟ್ಟ ಕುಟುಂಬಗಳಿಗೆ ಸಂತಾಪಗಳನ್ನು ವ್ಯಕ್ತಪಡಿಸುತ್ತೇವೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇವೆ.

ಭಾರತವು ಭಯೋತ್ಪಾದನೆಯನ್ನು ಅದರ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳನ್ನು ಖಂಡಿಸುತ್ತದೆ. ಭಯೋತ್ಪಾದನೆಯ ಬಗ್ಗೆ ಶೂನ್ಯ ಸಹಿಷ್ಣುತೆಯ ನೀತಿಯಲ್ಲಿ ದೇಶ ದೃಢವಾಗಿ ನಿಂತಿದೆ".

@netanyahu

 

*****


(रिलीज़ आईडी: 2164815) आगंतुक पटल : 22
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Manipuri , Assamese , Punjabi , Gujarati , Odia , Tamil , Telugu , Malayalam