ಪ್ರಧಾನ ಮಂತ್ರಿಯವರ ಕಛೇರಿ
ಭಾರತ ಮತ್ತು ಅಮೆರಿಕಾ ನಡುವಿನ ಸಂಬಂಧಗಳ ಬಲವನ್ನು ಪುನರುಚ್ಚರಿಸಿದ ಪ್ರಧಾನಮಂತ್ರಿ
Posted On:
10 SEP 2025 7:52AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತ ಮತ್ತು ಅಮೆರಿಕಾ ನಡುವಿನ ಸಂಬಂಧಗಳ ಬಲವನ್ನು ಪುನರುಚ್ಚರಿಸಿದ್ದಾರೆ ಹಾಗೂ ಎರಡು ರಾಷ್ಟ್ರಗಳ ನಡುವೆ ನಡೆಯುತ್ತಿರುವ ವ್ಯಾಪಾರ ಮಾತುಕತೆಗಳ ಬಗ್ಗೆ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. ಎರಡೂ ರಾಷ್ಟ್ರಗಳು ಜನರ ಉಜ್ವಲ, ಸಮೃದ್ಧ ಭವಿಷ್ಯದ ಭದ್ರತೆಗೆ ಒಟ್ಟಾಗಿ ಕೆಲಸ ಮಾಡಲಿವೆ ಎಂದು ಪ್ರಧಾನಮಂತ್ರಿ ಶ್ರೀ ಮೋದಿ ಅವರು ಹೇಳಿದ್ದಾರೆ.
ಅಮೆರಿಕಾ ಅಧ್ಯಕ್ಷರ x ಪೋಸ್ಟ್ ಗೆ ಶ್ರೀ ನರೇಂದ್ರ ಮೋದಿ ಅವರು ಪ್ರತಿಕ್ರಿಯಿಸಿದ್ದಾರೆ:
“ಭಾರತ ಮತ್ತು ಅಮೆರಿಕಾ ನಿಕಟ ಸ್ನೇಹಿತರು ಹಾಗೂ ಸಹಜ ಪಾಲುದಾರರು. ನಮ್ಮ ವ್ಯಾಪಾರದ ಮಾತುಕತೆಗಳು ಭಾರತ ಮತ್ತು ಅಮೆರಿಕಾ ಸಹಭಾಗಿತ್ವದ ಸಾಮರ್ಥ್ಯವನ್ನು ಮತ್ತಷ್ಟು ಮುಕ್ತಗೊಳಿಸಲಿದೆ ಎಂಬ ವಿಶ್ವಾಸವಿದೆ. ನಮ್ಮ ತಂಡಗಳು ಈ ಚರ್ಚೆಗಳನ್ನು ಆದಷ್ಟು ಬೇಗ ಮುಕ್ತಾಯಗೊಳಿಸಲು ಕೆಲಸ ಮಾಡುತ್ತಿವೆ. ನಾನು ಅಮೆರಿಕಾ ಅಧ್ಯಕ್ಷರಾದ ಟ್ರಂಪ್ ಅವರೊಂದಿಗೆ ಮಾತನಾಡಲು ಎದುರು ನೋಡುತ್ತಿದ್ದೇನೆ. ಎರಡೂ ರಾಷ್ಟ್ರಗಳು ಜನರ ಉಜ್ವಲ, ಸಮೃದ್ಧ ಭವಿಷ್ಯದ ಭದ್ರತೆಗೆ ಒಟ್ಟಾಗಿ ಕೆಲಸ ಮಾಡಲಿವೆ.
@realDonaldTrump @POTUS”
****
(Release ID: 2165157)
Visitor Counter : 2
Read this release in:
English
,
Urdu
,
Marathi
,
Hindi
,
Manipuri
,
Bengali-TR
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam