ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ನೇಪಾಳದಲ್ಲಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಅಧ್ಯಕ್ಷತೆಯಲ್ಲಿ ಭದ್ರತೆ ಕುರಿತ ಸಂಪುಟ ಸಮಿತಿ ಸಭೆ  

Posted On: 09 SEP 2025 10:28PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಿಮಾಚಲ ಪ್ರದೇಶ ಮತ್ತು ಪಂಜಾಬ್ ಗೆ ಅಧಿಕೃತ ಭೇಟಿ ನೀಡಿ ಹಿಂದಿರುಗಿದ ಬಳಿಕ ಇಂದು ನೇಪಾಳದಲ್ಲಿನ ಬೆಳವಣಿಗೆಗಳ ಕುರಿತು ಚರ್ಚಿಸಲು ಭದ್ರತೆ ಕುರಿತ ಸಂಪುಟ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಅನೇಕ ಯುವಜನರ ಜೀವವನ್ನು ಕಸಿದ ಹಿಂಸಾಚಾರದ ಬಗ್ಗೆ ಪ್ರಧಾನಮಂತ್ರಿ ತೀವ್ರ ದುಃಖ ವ್ಯಕ್ತಪಡಿಸಿದರು. ನೇಪಾಳದ ಎಲ್ಲಾ ನಾಗರಿಕರು ಶಾಂತಿ ಮತ್ತು ಏಕತೆಯ ಮೌಲ್ಯಗಳನ್ನು ಎತ್ತಿಹಿಡಿಯಬೇಕೆಂದು ಎಂದು ಅವರು ಮನಃಪೂರ್ವಕವಾಗಿ ಮನವಿ ಮಾಡಿದ್ದಾರೆ. 

ಎಕ್ಸ್  ಪೋಸ್ಟ್‌ ಗಳಲ್ಲಿ ಶ್ರೀ ಮೋದಿ ಅವರು ಹೀಗೆ ಹೇಳಿದ್ದಾರೆ:

"ಹಿಮಾಚಲ ಪ್ರದೇಶ ಮತ್ತು ಪಂಜಾಬ್‌ನಿಂದ ಇಂದು ನಾನು ಹಿಂದಿರುಗಿದ ಬಳಿಕ, ನೇಪಾಳದಲ್ಲಿನ ಬೆಳವಣಿಗೆಗಳ ಕುರಿತು ಭದ್ರತೆ ಕುರಿತ ಸಂಪುಟ ಸಮಿತಿಯ ಸಭೆಯಲ್ಲಿ ಚರ್ಚಿಸಿದೆ. ನೇಪಾಳದಲ್ಲಿನ ಹಿಂಸಾಚಾರ ಹೃದಯ ವಿದ್ರಾವಕ. ಅನೇಕ ಯುವಕರು ತಮ್ಮ ಪ್ರಾಣ ಕಳೆದುಕೊಂಡಿರುವುದು ತಿಳಿದು ನನಗೆ ಅತೀವ ದುಃಖವಾಗಿದೆ. ನೇಪಾಳದ ಸ್ಥಿರತೆ, ಶಾಂತಿ ಮತ್ತು ಸಮೃದ್ಧಿ ನಮಗೆ ಅತ್ಯಂತ ಮುಖ್ಯವಾದುದು. ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವಂತೆ ನೇಪಾಳದಲ್ಲಿರುವ ನನ್ನ ಎಲ್ಲಾ ಸಹೋದರ ಸಹೋದರಿಯರಲ್ಲಿ ನಾನು ವಿನಮ್ರವಾಗಿ ಮನವಿ ಮಾಡುತ್ತೇನೆ."

“आज हिमाचल प्रदेश और पंजाब के दौरे से लौटने के बाद Cabinet Committee on Security की बैठक में नेपाल के घटनाक्रम को लेकर विस्तार से चर्चा हुई। नेपाल में हुई हिंसा हृदयविदारक है। यह जानकर बहुत पीड़ा हुई कि इसमें अनेक युवाओं की जान गई है। नेपाल की स्थिरता, शांति और समृद्धि हमारे लिए अत्यंत महत्वपूर्ण है। मैं नेपाल के अपने सभी भाई-बहनों से विनम्र अपील करता हूं कि वे शांति-व्यवस्था बनाए रखें।”

“आज दिनभरीको भ्रमणबाट फर्किएपछि सुरक्षा सम्बन्धी मन्त्रिपरिषद् समितिको बैठकमा नेपालको घटनाक्रमहरुको बारेमा विस्तृत छलफल भयो । नेपालमा भएको हिंसा हृदयविदारक छ । धेरै युवाहरुले आफ्नो ज्यान गुमाउनु परेकोमा मेरो मन अत्यन्तै विचलित छ । नेपालको स्थिरता, शान्ति र समृद्धि अत्यन्त महत्वपूर्ण छ । म नेपालका सबै मेरा दाजुभाइ तथा दिदीबहिनीहरुलाई शान्ति–व्यवस्था कायम राख्न विनम्रतापूर्वक अपील गर्दछु ।”

 

*****

 


(Release ID: 2165239) Visitor Counter : 2