ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ಮಾತನಾಡಿದ ಪ್ರಧಾನಮಂತ್ರಿ ಮೋದಿ


ಭಾರತ-ಇಟಲಿ ಕಾರ್ಯತಂತ್ರದ ಪಾಲುದಾರಿಕೆಯನ್ನು ಗಾಢಗೊಳಿಸುವ ಬದ್ಧತೆಯನ್ನು ಪುನರುಚ್ಚರಿಸಿದ ಉಭಯ ನಾಯಕರು

ಉಕ್ರೇನ್‌ನ ಸಂಘರ್ಷದ ಶಾಂತಿಯುತ ಮತ್ತು ಆರಂಭಿಕ ಪರಿಹಾರದ ಕುರಿತಾಗಿ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡ ಉಭಯ ನಾಯಕರು

ಭಾರತ-ಯುರೋಪಿಯನ್ ಒಕ್ಕೂಟದ ಮುಕ್ತ ವ್ಯಾಪಾರ ಒಪ್ಪಂದದ ಆರಂಭಿಕ ತೀರ್ಮಾನಕ್ಕೆ ಬೆಂಬಲ ವ್ಯಕ್ತಪಡಿಸಿದ ಪ್ರಧಾನಮಂತ್ರಿ ಮೆಲೋನಿ

ಭಾರತ-ಮಧ್ಯಪ್ರಾಚ್ಯ-ಯುರೋಪ್ ಆರ್ಥಿಕ ಕಾರಿಡಾರ್ ಉಪಕ್ರಮದ ಅಡಿಯಲ್ಲಿ ಸಂಪರ್ಕವನ್ನು ಉತ್ತೇಜಿಸಲು ಉಭಯ ನಾಯಕರ ಬದ್ಧತೆ

Posted On: 10 SEP 2025 6:23PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಟಲಿಯ ಪ್ರಧಾನಮಂತ್ರಿ ಅವರಾದ ಘನತೆವೆತ್ತ ಶ್ರೀಮತಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ದೂರವಾಣಿಯಲ್ಲಿ ಸಂಭಾಷಣೆ ನಡೆಸಿದರು.

ಹೂಡಿಕೆ, ರಕ್ಷಣೆ, ಭದ್ರತೆ, ಬಾಹ್ಯಾಕಾಶ, ವಿಜ್ಞಾನ ಮತ್ತು ತಂತ್ರಜ್ಞಾನ, ಶಿಕ್ಷಣ, ನಾಗರೀಕ ಸಂಬಂಧಗಳು ಮತ್ತು ಭಯೋತ್ಪಾದನೆ ನಿಗ್ರಹದಂತಹ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಕಾರ್ಯತಂತ್ರದ ಸಹಭಾಗಿತ್ವದಲ್ಲಿನ ಬೆಳವಣಿಗೆಗಳನ್ನು ಉಭಯ ನಾಯಕರು ಪರಿಶೀಲಿಸಿ, ಸಕಾರಾತ್ಮಕವಾಗಿ ಅವುಗಳನ್ನು ತೀರ್ಮಾನಿಸಿದರು. 2025-29ರ ಜಂಟಿ ಕಾರ್ಯತಂತ್ರದ ಕ್ರಿಯಾ ಯೋಜನೆಗೆ ಅನುಗುಣವಾಗಿ ಪಾಲುದಾರಿಕೆಯನ್ನು ಮತ್ತಷ್ಟು ಬಿಗಿಗೊಳಿಸುವತ್ತ ಉಭಯ ನಾಯಕರು ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು.

ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತಾಗಿ ಉಭಯ ನಾಯಕರು ತಮ್ಮ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಉಕ್ರೇನ್‌ನ ಸಂಘರ್ಷವನ್ನು ಶೀಘ್ರವಾಗಿ, ಶಾಂತಿಯುತವಾಗಿ ಪರಿಹರಿಸುವ ಅಗತ್ಯವನ್ನು ಇಬ್ಬರೂ ಒಪ್ಪಿಕೊಂಡು, ಈ ದಿಕ್ಕಿನಲ್ಲಿ ಸಕಲ ಪ್ರಯತ್ನಗಳಿಗೆ ಭಾರತದ ಸಂಪೂರ್ಣ ಬೆಂಬಲವನ್ನು ನೀಡುವುದಾಗಿ ಪ್ರಧಾನಮಂತ್ರಿ ಮೋದಿ ಅವರು  ಪುನರುಚ್ಚರಿಸಿದರು.

ಪರಸ್ಪರ ಪ್ರಯೋಜನಕಾರಿಯಾದ ಭಾರತ-ಯುರೋಪಿಯನ್ ಒಕ್ಕೂಟದ ಮುಕ್ತ ವ್ಯಾಪಾರ ಒಪ್ಪಂದವನ್ನು ಆದಷ್ಟು ಬೇಗ ನಿರ್ಧರಿಸಿ, 2026 ರಲ್ಲಿ ಭಾರತ ಆಯೋಜಿಸಲಿರುವ 'ಕೃತಕ ಬುದ್ಧಿಮತ್ತೆ ಪ್ರಭಾವ' (ಎ.ಐ. ಇಂಪ್ಯಾಕ್ಟ್) ಶೃಂಗಸಭೆಯ ಯಶಸ್ಸಿಗೆ ಇಟಲಿಯು ಬಲವಾಗಿ ಬೆಂಬಲ ನೀಡುವುದಾಗಿ ಪ್ರಧಾನಮಂತ್ರಿ ಮೆಲೋನಿ ಪುನರುಚ್ಚರಿಸಿದರು. ಭಾರತ ಮಧ್ಯಪ್ರಾಚ್ಯ ಯುರೋಪ್ ಆರ್ಥಿಕ ಕಾರಿಡಾರ್ (IMEEEC) ಉಪಕ್ರಮದ ಅಡಿಯಲ್ಲಿ ಸಂಪರ್ಕವನ್ನು ಉತ್ತೇಜಿಸಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆಯೂ ಉಭಯ ನಾಯಕರು ಸಮ್ಮತಿ ಸೂಚಿಸಿದ್ದಾರೆ.

ಉಭಯ ನಾಯಕರು ಪರಸ್ಪರ ಸಂಪರ್ಕದಲ್ಲಿರಲು ಒಪ್ಪಿಕೊಂಡಿದ್ದಾರೆ.

****


(Release ID: 2165464) Visitor Counter : 2