ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಮೋದಿ ಅವರು ಕತಾರ್ ಅಮೀರ್ ಗೌರವಾನ್ವಿತ ಶೇಖ್ ತಮೀನ್ ಬಿನ್ ಹಮದ್ ಅಲ್ ಥಾನಿ ಅವರೊಂದಿಗೆ ಮಾತನಾಡಿದರು
ದೋಹಾದಲ್ಲಿ ನಡೆದ ದಾಳಿಗಳ ಬಗ್ಗೆ ಪ್ರಧಾನಮಂತ್ರಿ ಮೋದಿ ತೀವ್ರ ಕಳವಳ ವ್ಯಕ್ತಪಡಿಸಿದರು ಮತ್ತು ಕತಾರ್ ದೇಶದ ಸಾರ್ವಭೌಮತ್ವದ ಉಲ್ಲಂಘನೆಯನ್ನು ಖಂಡಿಸಿದರು
ಸಂವಾದ ಮತ್ತು ರಾಜತಾಂತ್ರಿಕತೆಯ ಮೂಲಕ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಉಲ್ಬಣಗೊಳ್ಳುವುದನ್ನು ತಪ್ಪಿಸುವ ಅಗತ್ಯದ ಬಗ್ಗೆ ಪ್ರಧಾನಮಂತ್ರಿ ಮೋದಿ ಕರೆ ನೀಡಿದರು
ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳಲ್ಲಿ ಭಯೋತ್ಪಾದನೆಯ ವಿರುದ್ಧ ಭಾರತದ ದೃಢ ನಿಲುವನ್ನು ಪ್ರಧಾನಮಂತ್ರಿ ಉಲ್ಲೇಖಿಸಿದರು
ಪರಸ್ಪರ ಹಿತಾಸಕ್ತಿಯ ಎಲ್ಲಾ ಕ್ಷೇತ್ರಗಳಲ್ಲಿ ಭಾರತ-ಕತಾರ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಮುನ್ನಡೆಸಲು ಇಬ್ಬರೂ ನಾಯಕರು ಬದ್ಧತೆಯನ್ನು ಪುನರುಚ್ಚರಿಸಿದರು.
Posted On:
10 SEP 2025 8:21PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕತಾರ್ ದೇಶದ ಅಮೀರ್ ಗೌರವಾನ್ವಿತ ಶೇಖ್ ತಮೀಮ್ ಬಿನ್ ಹಮದ್ ಅಲ್-ಥಾನಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.
ದೋಹಾದಲ್ಲಿ ನಡೆದ ದಾಳಿಗಳ ಬಗ್ಗೆ ಪ್ರಧಾನಮಂತ್ರಿ ತೀವ್ರ ಕಳವಳ ವ್ಯಕ್ತಪಡಿಸಿದರು ಮತ್ತು ಕತಾರ್ ದೇಶದ ಸಾರ್ವಭೌಮತ್ವದ ಉಲ್ಲಂಘನೆಯನ್ನು ಖಂಡಿಸಿದರು. ಕದನ ವಿರಾಮವನ್ನು ಸಾಧಿಸಲು ಮತ್ತು ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಗಾಜಾದಲ್ಲಿ ಮಧ್ಯಸ್ಥಿಕೆ ವಹಿಸುವ ಪ್ರಯತ್ನಗಳು ಸೇರಿದಂತೆ ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಯನ್ನು ಉತ್ತೇಜಿಸುವಲ್ಲಿ ಕತಾರ್ ವಹಿಸುತ್ತಿರುವ ಪಾತ್ರವನ್ನು ಪ್ರಧಾನಮಂತ್ರಿ ಶ್ಲಾಘಿಸಿದರು.
ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವುದನ್ನು ಮತ್ತು ಪರಿಸ್ಥಿತಿ ಉಲ್ಬಣಗೊಳ್ಳುವುದನ್ನು ತಪ್ಪಿಸುವ ಅಗತ್ಯವನ್ನು ಪ್ರಸ್ತಾಪಿಸಿದ ಪ್ರಧಾನಮಂತ್ರಿ ಅವರು ಆ ಸಂಬಂಧಿತ ಕ್ರಮಗಳಿಗೆ ಬೆಂಬಲವನ್ನು ಪುನರುಚ್ಚರಿಸಿದರು. ಈ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಗೆ ಹಾಗು ಭಯೋತ್ಪಾದನೆಯನ್ನು ಅದರ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳಲ್ಲಿ ನಿಗ್ರಹಿಸಲು ಭಾರತ ದೃಢವಾಗಿ ಬೆಂಬಲ ನೀಡುತ್ತದೆ ಎಂದು ಅವರು ಒತ್ತಿ ಹೇಳಿದರು.
ಕತಾರ್ ಜನರು ಮತ್ತು ಆಡಳಿತದೊಂದಿಗೆ ಒಗ್ಗಟ್ಟಿನ ಅಭಿವ್ಯಕ್ತಿಗಾಗಿ ಶೇಖ್ ತಮೀಮ್ ಪ್ರಧಾನಮಂತ್ರಿ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದರು.
ಭಾರತ-ಕತಾರ್ ಕಾರ್ಯತಂತ್ರದ ಪಾಲುದಾರಿಕೆಯಲ್ಲಿನ ನಿರಂತರ ಪ್ರಗತಿಯ ಬಗ್ಗೆ ಇಬ್ಬರೂ ನಾಯಕರು ತೃಪ್ತಿ ವ್ಯಕ್ತಪಡಿಸಿದರು ಮತ್ತು ಪರಸ್ಪರ ಆಸಕ್ತಿಯ ಎಲ್ಲಾ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಮುನ್ನಡೆಸುವ ಬದ್ಧತೆಯನ್ನು ಪುನರುಚ್ಚರಿಸಿದರು.
ಅವರು ನಿಕಟ ಸಂಪರ್ಕದಲ್ಲಿರಲು ಒಪ್ಪಿಕೊಂಡರು.
****
(Release ID: 2165522)
Visitor Counter : 2
Read this release in:
English
,
Urdu
,
Marathi
,
Hindi
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam