ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಏಷ್ಯಾ ಕಪ್ ಬೆಳ್ಳಿ ಪದಕ ಗೆದ್ದ ಭಾರತೀಯ ಮಹಿಳಾ ಹಾಕಿ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ 

प्रविष्टि तिथि: 14 SEP 2025 9:21PM by PIB Bengaluru

2025ರ ಮಹಿಳಾ ಏಷ್ಯಾ ಕಪ್‌ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತೀಯ ಮಹಿಳಾ ಹಾಕಿ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು ಹಾಗೂ ತಂಡ ಯಶಸ್ವಿಯಾಗಿ ಬೆಳ್ಳಿ ಪದಕವನ್ನು ಪಡೆದುಕೊಂಡರು ಮತ್ತು ರಾಷ್ಟ್ರಕ್ಕೆ ಹೆಮ್ಮೆ ತಂದರು ಎಂದು ಪ್ರಧಾನಮಂತ್ರಿಯವರು ಹೇಳಿದರು.

ಪ್ರಧಾನಮಂತ್ರಿಯವರು ಇಂದು ಎಕ್ಸ್ ತಾಣದ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ :

"ನಮ್ಮ ಭಾರತೀಯ ಮಹಿಳಾ ಹಾಕಿ ತಂಡವು ಮಹಿಳಾ ಏಷ್ಯಾ ಕಪ್ 2025ರಲ್ಲಿ ಬೆಳ್ಳಿ ಪದಕವನ್ನು ಗೆಲ್ಲುವ ಮೂಲಕ ರಾಷ್ಟ್ರವನ್ನು ಹೆಮ್ಮೆಪಡುವಂತೆ ಮಾಡಿದೆ. ಅವರಿಗೆ ಅಭಿನಂದನೆಗಳು. ಅವರ ದೃಢನಿಶ್ಚಯ ಮತ್ತು ತಂಡದ ಮನೋಭಾವವು ಅತ್ಯುತ್ತಮವಾಗಿದೆ. ಮುಂಬರುವ ಸಮಯಗಳಲ್ಲಿ ಉತ್ತಮ ಪ್ರದರ್ಶನ ನೀಡಲಿ ಎಂದು ಅವರಿಗೆ ಶುಭ ಹಾರೈಸುತ್ತೇನೆ."

 

 

*****

 


(रिलीज़ आईडी: 2166706) आगंतुक पटल : 25
इस विज्ञप्ति को इन भाषाओं में पढ़ें: Assamese , English , Urdu , Marathi , हिन्दी , Bengali , Manipuri , Punjabi , Gujarati , Odia , Tamil , Telugu , Malayalam